ಕೇಂದ್ರ ಸರ್ಕಾರದ ಮಹತ್ವದ ಆದೇಶ: ಜಮ್ಮು, ಕಾಶ್ಮೀರ ದಿಂದ ಲಡಾಕ್ ವಿಭಜನೆ..!!
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ಅರ್ಟಿಕಲ್ 370, 35 ಎ ಬಗ್ಗೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕೇಂದ್ರ ಸರ್ಕಾರ ಜಮ್ಮು, ಕಾಶ್ಮೀರವನ್ನು ಮೂರು ವಿಭಾಗಗಳಾಗಿ ವಿಭಜನೆ ಮಾಡಿದ್ದು, ಅದರಂತೆ ಜಮ್ಮು, ಕಾಶ್ಮೀರ ಹಾಗೂ ಲಡಾಕ್ ಕ್ಕೆಂದು ವಿಂಗಡಣೆ ಮಾಡಲಾಗಿದೆ. ಸದ್ಯ ಜಮ್ಮು, ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗಲಿದ್ದು, ಅವುಗಳಿಗೆ ವಿಧಾನಸಭೆ ಇರಲಿದೆ. ಆದರೆ ಲಡಾಕ್ ಕೇಂದ್ರಾಡಳಿತ ಪ್ರದೇಶ ಮಾತ್ರ ಆಗಲಿದ್ದು, ಅದಕ್ಕೆ ವಿಧಾನಸಭೆ ಇರಲ್ಲ ಎಂದು ಕೇಂದ್ರ ಸರ್ಕಾರ ಸದ್ಯ ಘೋಷಣೆ ಮಾಡಿದೆ.
ರಾಜ್ಯಸಭೆಯಲ್ಲಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡಿಸಿದ ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನಕ್ಕೆ ಸಂಬಂಧಿಸಿದ 370 ಮತ್ತು 35(ಎ) ರದ್ದು ಮಾಡಲಾದ ಮಸೂದೆಗೆ ರಾಷ್ಟ್ರಪತಿಗಳು ಸಹಿ ಹಾಕಿದ್ದಾರೆ ಎನ್ನಲಾಗಿದೆ.ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಆರ್ಟಿಕಲ್ 370, 35 ಎ ಬಗ್ಗೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಅದರ ಪ್ರಕಾರ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಇಲ್ಲ ಎಂದ ಕೇಂದ್ರ ಸರ್ಕಾರ, ಅರ್ಟಿಕಲ್ 370ನೇ ವಿಧಿ ಹಾಗೂ 35 ಎ ವಿಧಿಯನ್ನು ರದ್ದುಗೊಳಿಸಿ ಕಾಶ್ಮೀರ ಭಾರತದ ಅವಿಭಾಜ್ಯ ಅಂಗವೆಂದು ಘೋಷಿಸಿದೆ. ಸದ್ಯ ಇದರಿಂದ ರಾಜ್ಯಸಭೆಯಲ್ಲಿ ಗದ್ದಲ ಏರ್ಪಟ್ಟಿದೆ.
Comments