ರಾಜ್ಯ ಸರ್ಕಾರದಿಂದ ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್
ರಾಜ್ಯ ಸರ್ಕಾರವು ಈಗಾಗಲೇ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ.. ಸಾರ್ವಜನಿಕರಿಗೆ ಸದುಪಯೋಗ ಆಗುವಂತಹ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ.. ಅದೇ ರೀತಿ ಸಾರ್ವಜನಿಕರು ಕೂಡ ಆ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ.. ಬಡ ಬಗ್ಗರಿಗೆ ಆಸ್ಪತ್ರೆಗೆ ಹೆಚ್ಚು ಹಣ ಖರ್ಚು ಮಾಡಲು ಸಾದ್ಯವಾಗದ ಹಿನ್ನಲೆಯಲ್ಲಿ ಈ ಬಗ್ಗೆ ಚಿಂತನೆ ನಡೆಸಿ ರಾಜ್ಯ ಸರ್ಕಾರವು ಆರೋಗ್ಯ ಭಾಗ್ಯ ಯೋಜನೆಯನ್ನು ಜಾರಿಗೆ ತಂದಿತ್ತು.. ಇದೀಗ ಅದೇ ಯೋಜನೆಯಲ್ಲಿ ಇನ್ನೊಂದು ಹೆಜ್ಜೆ ಮುಂದೆ ಹೋಗಿದೆ..
ಹೌದು.. ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. ಆರೋಗ್ಯ ಭಾಗ್ಯ ಯೋಜನೆಯನ್ನು ಸರ್ಕಾರಿ ನೌಕರರಿಗೂ ವಿಸ್ತರಿಸಲು ಇದೀಗ ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಅವಲಂಭಿತರು ಆಸ್ಪತ್ರೆ ಚಿಕಿತ್ಸೆಗೆ ಮಾಡಿದ ವೆಚ್ಚವನ್ನು ಮರುಪಾವತಿ ಪಡೆಯಲು ವರ್ಷಗಟ್ಟಲೇ ವಿಳಂಬ ಆಗುತ್ತಿರುವ ದೃಷ್ಟಿಯಿಂದ ಸರ್ಕಾರ ಈ ಕ್ರಮಕ್ಕೆ ಇದೀಗ ಮುಂದಾಗಿದೆ. ಪ್ರಸ್ತುತ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಆರೋಗ್ಯ ಭಾಗ್ಯ ಯೋಜನೆ ಜಾರಿಯಲ್ಲಿದೆ. ಇನ್ನು ಮುಂದೆ ಸರ್ಕಾರಿ ನೌಕರರಿಗೂ ಈ ಯೋಜನೆಯ ಲಾಭ ದೊರೆಯಲಿದೆ. ಈ ಕುರಿತಂತೆ ವಿವರವಾದ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ…..ನೂತನ ಸರ್ಕಾರ ಜಾರಿಗೆ ಬಂದ ಮೇಲೆ ಸಾಕಷ್ಟು ಕಾರ್ಯಗಳು ಚಾಲ್ತಿಗೆ ಬಂದಿವೆ…ಈ ಯೋಜನೆಯನ್ನು ಫಲಾನುಭವಿಗಳು ಸದುಪಯೋಗ ಪಡಿಸಿಕೊಳ್ಳಬೇಕಾಗಿದೆ.
Comments