ಸುಷ್ಮಾಸ್ವರಾಜ್ ನಿಧನಕ್ಕೆ ಕಂಬನಿ ಮಿಡಿದ ದೇವೇಗೌಡರು..!!

07 Aug 2019 9:33 AM | General
424 Report

ಮಾಜಿ ಕೇಂದ್ರ ಸಚಿವೆ, ಬಿಜೆಪಿ ಹಿರಿಯ ನಾಯಕಿಯಾದ ಸುಷ್ಮಾ ಸ್ವರಾಜ್ ನೆನ್ನೆ ರಾತ್ರಿ ತೀವ್ರ ಹೃದಯಾಘಾತದಿಂದ ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಕೊನೆಯುಸಿರೆಳೆದಿದ್ದಾರೆ..  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಕಂಬನಿ ಮಿಡಿದಿದ್ದು, ಸಹೋದರಿ ಸುಷ್ಮಾ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ನೋವುಂಟಾಗಿದೆ ಎಂದು ತಿಳಿಸಿದ್ದಾರೆ..

ಅತಿ ಕಿರಿಯ ವಯಸ್ಸಿನಲ್ಲೇ ಹರಿಯಾಣ ರಾಜ್ಯದಲ್ಲಿ ಸಂಪುಟ ದರ್ಜೆ ಸಚಿವರಾಗಿ ಅವರು ಕಾರ್ಯ ನಿರ್ವಹಿಸಿದ್ದರು ಎಂದು ಮಾಜಿ ಪ್ರಧಾನಿ ದೇವೆಗೌಡರು ಬಿಜೆಪಿ ಹಿರಿಯನಾಯಕಿ, ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್  ಅವರನ್ನು   ಸ್ಮರಿಸಿಕೊಂಡಿದ್ದಾರೆ. ದೇಶದ ಎರಡನೇ ಮಹಿಳಾ ವಿದೇಶಾಂಗ ಸಚಿವೆಯಾಗಿಯೂ ಸುಷ್ಮಾ ಸ್ವರಾಜ್ ಅವರು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಿದ್ದು, ಅವರ ನಿಧನದಿಂದ ದೇಶ ಒಬ್ಬ ಧೈರ್ಯವಂತೆ ಹಾಗೂ ಮಾತೃ ಹೃದಯಿ ಹೆಣ್ಣುಮಗಳನ್ನು ಕಳೆದುಕೊಂಡಿದೆ ಎಂದು ಸಂತಾಪ ಸೂಚಿಸಿದ್ದಾರೆ.. ದೇಶದ ಗಣ್ಯಾತಿಗಣ್ಯರೆಲ್ಲರೂ ಸುಷ್ಮಾ ಅವರ ನಿಧನಕ್ಕೆ ಸಂತಾಪವನ್ನು ಸೂಚಿಸಿದ್ದಾರೆ..  

Edited By

Manjula M

Reported By

Manjula M

Comments