ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಕಾಂಗ್ರೆಸ್ ಮುಖಂಡ..!!

14 Aug 2019 10:12 AM | General
562 Report

ಬೆಂಗಳೂರಿನ ಯಲಹಂಕ ನ್ಯೂಟೌನ್ ನಲ್ಲಿ ಕಾಂಗ್ರೆಸ್ ಮುಖಂಡರೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ..ಕಾಂಗ್ರೆಸ್ ಮುಖಂಡ ವೀರಣ್ಣ ಗೌಡ (50) ಆತ್ಮಹತ್ಯೆ ಮಾಡಿಕೊಂಡಿರುವವರು..

ಮೂಲತಃ ವೀರಣ್ಣ ಗೌಡ ಅವರು ಹೆಸರುಘಟ್ಟ ನಿವಾಸಿಯಾಗಿದ್ದರು.. ಮಂಗಳವಾರ ರಾತ್ರಿ 7.30 ರ ಸುಮಾರಿಗೆ ತಮ್ಮ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಮುಖಂಡ ವೀರಣ್ಣ ಗೌಡರು ವೃತ್ತಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಆಗಿದ್ದರು. ವೀರಣ್ಣ ಅವರು ಕೆಲ ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಅನಾರೋಗ್ಯಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಈ ಘಟನೆಯ ಸಂಬಂಧ ಯಲಹಂಕ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಡಿಸಿಕೊಳ್ಳಲಾಗಿದೆ.

Edited By

Manjula M

Reported By

Manjula M

Comments

Cancel
Done