ಚಿರಂಜೀವಿ ಜೊತೆ ಡ್ಯಾನ್ಸ್ ವಿಡಿಯೋ ವೈರಲ್ : ಈ ಬಗ್ಗೆ ಸಂಸದೆ ಸುಮಲತಾ ಹೇಳಿದ್ದೇನು..?

ಕೆಲ ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಸುಮಲತಾ ಮೆಗಾಸ್ಟಾರ್ ಚಿರಂಜೀವಿ ಜೊತೆ ಡ್ಯಾನ್ಸ್ ಮಾಡಿರುವ ವಿಡಿಯೋವೊಂದು ಹರಿದಾಡುತ್ತಿದೆ. ಚಿರು ಹುಟ್ಟುಹಬ್ಬದ ಪ್ರಯುಕ್ತ ಸುಮಲತಾ ಚಿರು ಜೊತೆ ಡ್ಯಾನ್ಸ್ ಮಾಡಿದ್ದಾರೆ ಎಂಬ ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಕೇಳಿ ಬರುತ್ತಿತ್ತು. ಆದರೆ ಸುಮಲತಾ ಅಂಬರೀಶ್ ಆ ವಿಷಯಕ್ಕೆ ಸಂಬಂಧ ಪಟ್ಟಂತೆ ಬೇಸರ ವ್ಯಕ್ತಪಡಿಸಿದ್ದಾರೆ. ಈ ವಿಷಯವಾಗಿ ಕುರಿತು ಸ್ಪಷ್ಟನೆ ನೀಡಿರುವ ಸುಮಲತಾ ಅಂಬರೀಶ್, ಇದು 4 ವರ್ಷಗಳ ಹಿಂದಿನ ಹಳೆಯ ವಿಡಿಯೋ ಆಗಿದೆ.
ಅಷ್ಟೆ ಅಲ್ಲದೆ ನನ್ನ ಹೆಸರಿನ ನಕಲಿ ಅಕೌಂಟ್ ಗಳಲ್ಲಿ ಕಿಡಿಗೇಡಿಗಳು ವಿಡಿಯೋ ಹಾಕಿದ್ದು, ಇದರಿಂದ ನನ್ನ ತೇಜೋವಧೆಗೆ ಯತ್ನಿಸಲಾಗಿದೆ ಎಂದಿದ್ದಾರೆ. ಅಲ್ಲದೇ ಫೇಸ್ ಬುಕ್ ನಲ್ಲಿ ನಕಲಿ ಅಕೌಂಟ್ ತೆಗೆದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಂಸದೆ ಸೈಬರ್ ಕ್ರೈಂಗೆ ದೂರು ನೀಡಿದ್ದಾರೆ. ಚಿರಂಜೀವಿ ಬರ್ತ್ ಡೇ ಪಾರ್ಟಿಯಲ್ಲಿ ಭಾಗವಹಿಸಿದ್ದ ಸುಮಲತಾ ಅಂಬರೀಶ್ ಡ್ಯಾನ್ಸ್ ಮಾಡಿದ್ದಾರೆ ಎನ್ನಲಾಗಿದೆ. ಸುಮಲತಾ ಅವರ ಫೇಸ್ ಬುಕ್ ಖಾತೆಯಲ್ಲಿ ಈ ವಿಡಿಯೋ ಇದೆ. ಇದಕ್ಕೆ ಕಿಡಿಕಾರಿರುವ ಜನರು ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಇರಬೇಕಾದರೆ ಸುಮಲತಾ ಡ್ಯಾನ್ಸ್ ಮಾಡಿರುವುದು ಸರಿನಾ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಒಟ್ಟಿನಲ್ಲಿ ಇದು ಹಳೆಯ ವಿಡಿಯೋ ಎಂದು ಸುಮಲತಾ ಸ್ಪಷ್ದ ಪಡಿಸಿದ್ದಾರೆ. ಆದರೆ ಈ ವಿಡಿಯೋವನ್ನು ಯಾರು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ ಎಂಬುದು ಮಾತ್ರ ತಿಳಿದಿಲ್ಲ.. ಈ ಬಗ್ಗೆ ಸುಮಲತಾ ಸೈಬರ್ ಕ್ರೈಂ ಗೆ ದೂರು ನೀಡಿದ್ದಾರೆ.
Comments