ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಇನ್ನಿಲ್ಲ

24 Aug 2019 12:53 PM | General
368 Report

ಅನಾರೋಗ್ಯದ ಹಿನ್ನಲೆಯಲ್ಲಿ ಆಸ್ಪತ್ರಗೆ ದಾಖಲಾಗಿದ್ದ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಇಂದು ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಅರುಣ್ ಜೇಟ್ಲಿ ಅವರಿಗೆ ಅನೇಕ ದಿನಗಳಿಂದ ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದ ಕಾರಣದಿಂದ ಫೆಬ್ರವರಿಯಲ್ಲಿ ಬಜೆಟ್ ಕೂಡ ಮಂಡನೆ ಮಾಡಿರಲಿಲ್ಲ.. ಆಗಸ್ಟ್ 6ರಂದು ಬಿಜೆಪಿಯ ಹಿರಿಯ ನಾಯಕಿ, ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಅವರು ನಿಧನರಾಗಿದ್ದರು. ಈ ದುಃಖ ಮಾಸುವ ಮುನ್ನವೇ ಮತ್ತೊಂದು ಕಹಿ ಎದುರಾಗಿದೆ.

Edited By

Manjula M

Reported By

Manjula M

Comments