ಸೋಷಿಯಲ್ ಮಿಡೀಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ ಈ ಪೋಟೊ..!!!
ಗೊಂಬೆಗಳು ಎಂದರೆ ಮಕ್ಕಳಿಗೆ ತುಂಬಾ ಇಷ್ಟ.. ಇದೀಗ ಗೊಂಬೆಯ ಮೂಲಕ ಮಗುವಿಗೆ ಚಿಕಿತ್ಸೆ ನೀಡಿ , ಮಗುವನ್ನು ಗುಣಪಡಿಸಿದ್ದಾರೆ. ಗೊಂಬೆಗೆ ಚಿಕಿತ್ಸೆ ನೀಡುವ ಮೂಲಕ ವೈದ್ಯರು 11 ತಿಂಗಳ ಮಗುವಿನ ಕಾಲು ನೋವನ್ನು ಗುಣಪಡಿಸಿದ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ನವದೆಹಲಿಯ ಲೋಕನಾಯಕ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.
13 ದಿನಗಳ ಹಿಂದೆ ಝಿಕ್ರಾ ಮಲಗಿದ್ದಾಗ ಹಾಸಿಗೆ ಮೇಲಿಂದ ಕೆಳಗೆ ಬಿದ್ದು ಕಾಲು ಫ್ಯಾಕ್ಚರ್ ಆಗಿತ್ತು. ಆಗ ವೈದ್ಯರು ಟ್ರಾಕ್ಷನ್ ರಾಡ್ ಮೂಲಕ ಚಿಕಿತ್ಸೆ ನೀಡಲು ನಿರ್ಧಾರ ಮಾಡಿದ್ದರು.. ಇದೇ ವೇಳೆ ಚಿಕಿತ್ಸೆಗೆಂದು ಝಿಕ್ರಾಳನ್ನು ವೈದ್ಯರು ಹಾಸಿಗೆ ಮೇಲೆ ಮಲಗಿಸಿದಾಗ ಆಕೆ ಒಂದೇ ಕಡೆ ಮಲಗುತ್ತಿರಲಿಲ್ಲ. ಹಾಗಾಗಿ ಝಿಕ್ರಾ ತಾಯಿ ಫರೀನ್ ಗೆ ಆಕೆಯ ಅಜ್ಜಿ ನೀಡಿದ್ದ ಗೊಂಬೆಯನ್ನು ಇಷ್ಟಪಡುತ್ತಿದ್ದಳು. ಹೀಗಾಗಿ ಝಿಕ್ರಾಗೆ ಬ್ಯಾಂಡೇಜ್ ಹಾಕಿದ್ದಾರೆ. ಇದನ್ನು ನೋಡಿದ ಝಿಕ್ರಾ ಸುಮ್ಮನೆ ಬ್ಯಾಂಡೇಜ್ ಕಟ್ಟಿಸಿಕೊಂಡಿದ್ದಾಳೆ. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಜೀವ ಇಲ್ಲದ ಗೊಂಬೆಯು ಕೂಡ ಕೆಲವೊಮ್ಮೆ ಎಷ್ಟು ಉಪಯೋಗಕ್ಕೆ ಬರುತ್ತಲ್ವ..
Comments