ಬಿಪಿಎಲ್ ಕಾರ್ಡುದಾರರಿಗೆ ಇನ್ಮುಂದೆ ಸಿಗಲಿದೆ ಗೋಧಿ..!!!
ಅನ್ನಭಾಗ್ಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಬಿಪಿಎಲ್ ಕಾರ್ಡುದಾರರಿಗೆ ಗೋಧಿ ವಿತರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ... ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ನೀಡಿರುವುದರಿಂದ ಬಡ ಕುಟುಂಬಗಳಿಗೆ ಉಪಯೋಗವಾಗುತ್ತಿದೆ.. ಆದರೆ ಬಡವರಿಗೆ ಕೊಡಬೇಕಾದ ಕಾರ್ಡ್ ಗಳು ಕೂಡ ದುರ್ಬಳಕೆ ಆಗಿವೆ ಎನ್ನಲಾಗುತ್ತಿದೆ.
ಆರ್ಥಿಕವಾಗಿ ಹಿಂದುಳಿದ ಬಡ ಕುಟುಂಬಗಳಿಗೆ ವಿತರಿಸುವ ಬಿಪಿಎಲ್ ಪಡಿತರ ಚೀಟಿಯನ್ನು ಪಡೆದುಕೊಂಡ ಅನರ್ಹರಿಗೆ ಮತ್ತೊಂದು ಅವಕಾಶ ನೀಡಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡುದಾರರಿಗೆ ಪ್ರತಿ ತಿಂಗಳು ವಿತರಿಸುವ 7 ಕೆಜಿ ಅಕ್ಕಿ ಪ್ರಮಾಣವನ್ನು 5 ಕೆ.ಜಿ ಇಳಿಕೆ ಮಾಡಿ 2 ಕೆಜಿ ಗೋಧಿ ವಿತರಿಸಲು ಆಹಾರ ಇಲಾಖೆ ಚಿಂತನೆ ನಡೆಸಿದ್ದು, ಈ ಕುರಿತು ಪ್ರಸ್ತಾವನೆ ಸಲ್ಲಿಸಲು ಆಹಾರ ಇಲಾಖೆ ಸಿದ್ಧತೆ ಮಾಡಿಕೊಂಡಿದೆ ಎಂದು ಹೇಳಲಾಗುತ್ತಿದೆ. ಕೇಂದ್ರ ಸರ್ಕಾರ ನೀಡುವ 5 ಕೆಜಿ ಅಕ್ಕಿ ಜೊತೆಗೆ ರಾಜ್ಯ ಸರ್ಕಾರ ಎರಡು ಕೆಜಿ ಅಕ್ಕಿಯನ್ನು ಹೆಚ್ಚುವರಿಯಾಗಿ ಸೇರಿಸಿ ಒಟ್ಟು 7 ಕೆಜಿ ಅಕ್ಕಿ ನೀಡಲಾಗುತ್ತಿದೆ. ಇನ್ಮುಂದೆ 2 ಕೆಜಿ ಅಕ್ಕಿ ಕಡಿತ ಮಾಡಿ 2 ಕೆಜಿ ಗೋಧಿ ವಿತರಿಸಲು ಆಹಾರ ಇಲಾಖೆ ಮುಂದಾಗಿದೆ ಎನ್ನಲಾಗುತ್ತಿದೆ.. ಇದರಿಂದ ಬಡವರಿಗೆ ಉಪಯೋಗವಾಗುತ್ತದೆ..
Comments