ಮದುವೆಯಾಗಲು ಬಯಸುವವರಿಗೆ ರಾಜ್ಯ ಸರ್ಕಾರದಿಂದ ಸಿಕ್ತು ಗುಡ್ ನ್ಯೂಸ್..!!!

21 Oct 2019 1:02 PM | General
347 Report

ರಾಜ್ಯ ಸರ್ಕಾರವು ಈಗಾಗಲೇ ಸಾಕಷ್ಟು ರೀತಿಯ ಯೋಜನೆಗಳನ್ನು ಜಾರಿಗೆ ತಂದಿದೆ..ಪ್ರತಿಯೊಬ್ಬರಿಗೂ ಕೂಡ ಅನುಕೂಲವಾಗುವಂತೆ ಸರ್ಕಾರವು ಯೋಜನೆಗಳನ್ನು ರೂಪಿಸಿದ್ದು ಇದೀಗ ಮತ್ತೊಂದು ಸಿಹಿ ಸುದ್ದಿಯನ್ನು ನೀಡಿದೆ.ಮದುವೆ ಎಂಬುದು ಗಂಡು ಮತ್ತು ಹೆಣ್ಣಿನ ಬಾಂಧವ್ಯವನ್ನು ಹೆಚ್ಚಿಸುವ ಸಲುವಾಗಿ ಮಾಡುವ ಒಂದು ಕಾರ್ಯ ಎನ್ನಬಹುದು.. ಕೆಲವರು ಆಡಂಬರಕ್ಕಾಗಿ ಮಾಡುತ್ತಾರೆ ಮತ್ತೆ ಕೆಲವರು ದುಡ್ಡಿಲ್ಲದೆ ದೇವಸ್ಥಾನಗಳಲ್ಲಿ ಮಾಡುತ್ತಾರೆ.. ಇದೀಗ ಸರ್ಕಾರ ಕಡು ಬಡವರಿಗೆ ಯೋಜನೆಯೊಂದನ್ನು ರೂಪಿಸಿದೆ.

ರಾಜ್ಯದ ಬಡ ಜನತೆಗೆ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ಸಿಹಿಸುದ್ದಿ ನೀಡಿದ್ದು, ಹಿಂದೂ ಸಂಪ್ರದಾಯದಂತೆ ವಿವಾಹವಾಗಲು ಅನುಕೂಲವಾಗುವಂತೆ ಮುಜರಾಯಿ ಇಲಾಖೆ ಸರ್ಕಾರದ ವತಿಯಿಂದಲೇ ಉಚಿತ ಸಾಮೂಹಿಕ ವಿವಾಹ ಆಯೋಜಿಸಲು ಸರ್ಕಾರ ಮುಂದಾಗಿದೆ ಎಂದು ಮುಜರಾಯಿ ಖಾತೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಮಾಧ್ಯಮದವರೊಂದಿಗೆ  ಮಾತನಾಡಿದ ಅವರು,ರಾಜ್ಯದಲ್ಲಿ ಹಿಂದೂ ಸಂಪ್ರದಾಯದಂತೆ ಉಚಿತ ಸಾಮೂಹಿಕ ವಿವಾಹ ಯೋಜನೆಗೆ ಚಿಂತನೆ ನಡೆಸಲಾಗಿದ್ದು, ರಾಜ್ಯದ ಆಯ್ದ 100 ಎ ದರ್ಜೆ ದೇಗುಲಗಳಲ್ಲಿ ಸರ್ಕಾರದ ವತಿಯಿಂದ ವರ್ಷಕ್ಕೆ ಒಮ್ಮೆ ಉಚಿತ ಸಾಮೂಹಿಕ ವಿವಾಹ ಯೋಜನೆಗೆ ಸರ್ಕಾರ ಜಾರಿಗೆ ತರಲಿದೆ ಎಂದು ತಿಳಿಸಿದರು.. ಮದುವೆಯಾಗಲು ಇಚ್ಚಿಸುವವರು, ಕಡು ಬಡವರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ..

Edited By

Manjula M

Reported By

Manjula M

Comments