ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್..!!! ಇನ್ಮುಂದೆ ಖಾಸಗಿ ಕನ್ನಡ ಶಾಲೆಗಳ ಮಕ್ಕಳಿಗೂ 'ಬಿಸಿಯೂಟ'
ಈಗಾಗಲೇ ರಾಜ್ಯ ಸರ್ಕಾರವು ಸಾಕಷ್ಟು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲೂ ಸಾಕಷ್ಟು ಯೋಜನೆಗಳನ್ನು ಸರ್ಕಾರಿ ಶಾಲೆಗಳಿಗೋಸ್ಕರ ಮಾಡಿದೆ.. ಅದರಲ್ಲಿ ಬಿಸಿಯೂಟ ಯೋಜನೆ ಕೂಡ ಒಂದು..ಇದೀಗ ಖಾಸಗಿ ಕನ್ನಡ ಶಾಲೆಗಳಿಗೆ ಕೂಡ ಬಿಸಿಯೂಟ ಯೋಜನೆಯನ್ನು ಜಾರಿಗೊಳಿಸಲು ತಿರ್ಮಾನಿಸಲಾಗಿದೆ.. ಬಿಸಿಯೂಟಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನವೊಂದನ್ನು ಇದೀಗ ಕೈಗೊಂಡಿದೆ.
ಅನುದಾನರಹಿತ ಖಾಸಗಿ ಕನ್ನಡ ಮಾಧ್ಯಮ ಶಾಲೆಗಳ ಮಕ್ಕಳಿಗೂ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮ ವಿಸ್ತರಿಸಲು ನಿರ್ಧಾರ ಮಾಡಲಾಗಿದೆ ಎನ್ನಲಾಗುತ್ತಿದೆ.. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಈ ವಿಷಯ ತಿಳಿಸಿದ್ದು, ಖಾಸಗಿ ಕನ್ನಡ ಮಾಧ್ಯಮ ಶಾಲೆಗಳಿಗೆ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮ ವಿಸ್ತರಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ. ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕುಸಿಯುತ್ತಿದೆ ಎಂದು ಹೇಳಿರುವ ಸುರೇಶ್ ಕುಮಾರ್, ಕನ್ನಡ ಶಾಲೆಗಳನ್ನು ಮತ್ತಷ್ಟು ಬೆಳೆಸಲು ಸರ್ಕಾರ ಆಲೋಚನೆ ಮಾಡಿದೆ ಎಂದಿದ್ದಾರೆ. ಸರ್ಕಾರಿ ಶಾಲೆಗಳ ಕಡೆ ಜನರು ಒಲವು ಕಡಿಮೆಯಾಗುತ್ತಿದೆ.. ಸರ್ಕಾರಿ ಶಾಲೆಗಳಿಗೆ ಜನರ ಒಲವನ್ನು ತೋರಿಸಲು ಸಾಕಷ್ಟು ಯೋಜನೆಗಳನ್ನು ಜಾರಿಗೆ ತರುತ್ತಿದೆ.
Comments