ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕೇರಳದಲ್ಲಿ ಇಂದು ಬಂದ್!

17 Dec 2019 11:10 AM | General
188 Report

ಎಸ್‌ಡಿಪಿಐ, ಬಿಎಸ್‌ಪಿ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಬಂದ್ ಗೆ ಕರೆ ನೀಡಿದ್ದು, ಸುಮಾರು 30 ಸಂಘಟನೆಗಳು ಇದರಲ್ಲಿ ಭಾಗಿಯಾಗಿವೆ.

ಬಂದ್ ಹಿನ್ನೆಲೆಯಲ್ಲಿ ಕೇರಳ ರಾಜ್ಯದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ರಾಜ್ಯ ರಾಜಧಾನಿ ತಿರುವನಂತಪುರದಲ್ಲಿ ಅಂಗಡಿ ಮುಂಗಟ್ಟುಗಳು ಮುಚ್ಚಿವೆ. ಕೊಚ್ಚಿಯಲ್ಲಿ ಮೆಟ್ರೊ ಮತ್ತು ಸಂಚಾರ ಎಂದಿನಂತೆ ನಡೆಯುತ್ತಿದೆ. ಕೇರಳ ತಮಿಳುನಾಡು ಗಡಿಯಲ್ಲಿ ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಬಂದ್ ಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದು, ಇದು ದೇಶದ ಹಿತಾಸಕ್ತಿಗೆ ವಿರುದ್ಧದ ಕ್ರಮ ಎಂದಿದೆ. ಅಲ್ಲದೆ, ರಾಜಕೀಯ ಲಾಭಕ್ಕಾಗಿ ನಡೆಸುತ್ತಿರುವ ಪ್ರತಿಭಟನೆ ಎಂದು ಟೀಕಿಸಿದೆ.

Edited By

venki swamy

Reported By

venki swamy

Comments