6 ಕೋಟಿ ರೈತರ ಖಾತೆಗೆ 12 ಸಾವಿರ ಕೋಟಿ ವರ್ಗಾವಣೆ
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ 'ಆದಾಯ ಬೆಂಬಲ ಯೋಜನೆ'ಗೆ ಮತ್ತಷ್ಟು ಉತ್ತೇಜನ ನೀಡುವ ಸಲುವಾಗಿ ತುಮಕೂರಿನಲ್ಲಿ ನಡೆಯಲಿರುವ ಕೃಷಿ ಸಮಾವೇಶದಲ್ಲಿ ದೇಶದ 6 ಕೋಟಿ ರೈತರಿಗೆ 12 ಸಾವಿರ ಕೋಟಿ ರು. ವರ್ಗಾವಣೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ತಿಳಿಸಿದರು.
ಉಪಚುನಾವಣೆಯ ಫಲಿತಾಂಶದಿಂದ ಬಿಜೆಪಿ ಸರಕಾರ ರಾಜ್ಯದಲ್ಲಿ ಭದ್ರವಾಗಿ ನೆಲೆಯೂರಿದ ಬಳಿಕ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಜತೆಗೆ ವಿಜ್ಞಾನ ಸಮಾವೇಶದಲ್ಲೂ ಪಾಲ್ಗೊಳ್ಳಲಿದ್ದಾರೆ. ಪಿಎಂ-ಕಿಸಾನ್ (ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ) ಯೋಜನೆಯು ಈಗಾಗಲೇ 2019ರ ಫೆ.24ರಿಂದ ಜಾರಿಯಲ್ಲಿದೆ. 2,000 ರೂ. ಹಣವು ನೋಂದಣಿ ಮಾಡಿಕೊಂಡ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮೆಯಾಗಲಿದೆ. ಪ್ರಧಾನಿ ಮೋದಿ ಗುರುವಾರ ಬಿಡುಗಡೆ ಮಾಡಲಿರುವ ಮೊತ್ತವು ಪ್ರಸ್ತುತ ಹಣಕಾಸು ವರ್ಷದ ಮೂರನೇ ಕಂತಿನದ್ದಾಗಿರಲಿದೆ.
Comments