24 ವರ್ಷಗಳ ಬಳಿಕ ಹುತಾತ್ಮ ಯೋಧನ ಕುಟುಂಬಕ್ಕೆ ಉಚಿತ ಬಿಡಿಎ ನಿವೇಶನ ಹಂಚಿಕೆ..!

09 Apr 2020 1:04 PM | General
349 Report

ನಾಗಲ್ಯಾಂಡ್ನಲ್ಲಿ 24 ವರ್ಷಗಳ ಹಿಂದೆ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯಲ್ಲಿ ಎ.ಮುನಿಯಪ್ಪನ್ ಹುತಾತ್ಮರಗಿದ್ದರು. ಈಗ ಅವರ ಕುಟುಂಬಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಉಚಿತವಾಗಿ ನಿವೇಶನ ಹಂಚಿಕೆ ಮಾಡಲಾಗಿದೆ.

ಸೈನಿಕ ಕಲ್ಯಾಣ ಇಲಾಖೆಯ ಶಿಫಾರಸಿನ ಮೇರೆಗೆ ಬಿಡಿಎ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 30*40 ಅಡಿ ಅಳತೆಯ ನಿವೇಶನ ಹಂಚಿಕೆ ಮಾಡಿ ಆದೇಶ ಹೊರಡಿಸಿದೆ. ಯೋಧನ ಪತ್ನಿ ಎಂ.ದೇವಿ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಪತ್ರ ಬರೆದು ವಿಷಯ ತಿಳಿಸಿದ್ದಾರೆ. ತಾವು ಕೂಡ ಈಗ ತೀವ್ರ ಅನಾರೋಗ್ಯ ಪೀಡಿತರಾಗಿರುವ ವಿಷಯ ತಿಳಿದು ಅತ್ಯಂತ ದುಃಖವಾಯಿತು. ಭಗವಂತ ನಿಮಗೆ ಆಯುರಾರೋಗ್ಯವನ್ನು ನೀಡಿ ರಕ್ಷಿಸಲಿ ಎಂದು ಪ್ರಾರ್ಥಿಸುತ್ತೇನೆ .ದೇಶ ಸೇವೆಗೆ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟ ಮುನಿಯಪ್ಪನ್ ಅವರ ತ್ಯಾಗ ಸ್ಮರಣೀಯ. ತಾವು ನಿವೇಶನ ಹಂಚಿಕೆಯಾಗದೆ ತೊಂದರೆ ಅನುಭವಿಸುತ್ತಿರುವ ವಿಷಯ ನನ್ನ ಗಮನಕ್ಕೆ ಬಂದಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳಿಂದ ಮಾಹಿತಿ ತರಿಸಿ ಪರಿಶೀಲಿಸಿದಾಗ ತಮಗೆ ನಿವೇಶನ ಹಂಚಿಕೆಯಾಗಿರುವುದು ತಿಳಿದುಬಂದಿದೆ. ನಿವೇಶನ ಮಂಜೂರಾತಿ ಪತ್ರ ಇದರೊಂದಿಗೆ ಲಗತ್ತಿಸಿ ಕಳುಹಿಸಲಾಗಿದೆ. ತಮಗೆ, ತಮ್ಮ ಕುಟುಂಬದವರಿಗೆ ಮತ್ತೊಮ್ಮೆ ಶುಭ ಹಾರೈಕೆಗಳು ಎಂದು ಮುಖ್ಯಮಂತ್ರಿ ಪತ್ರದಲ್ಲಿ ತಿಳಿಸಿದ್ದಾರೆ.

Edited By

venki swamy

Reported By

venki swamy

Comments