ಮದ್ಯ ಪ್ರಿಯರಿಗೆ ಗುಡ್ನ್ಯೂಸ್: ಲಾಕ್ ಡೌನ್ ಮುಂದುವರೆದರೂ ಸಿಗುತ್ತೆ `ಎಣ್ಣೆ'?
21 ದಿನಗಳ ಲಾಕ್ಡೌನ್ ಸಂದರ್ಭ ಮದ್ಯ ವ್ಯಸನಿಗಳು ಭಾರೀ ಸಮಸ್ಯೆ ಎದುರಿಸುತ್ತಿದ್ದು ಈಗಾಗಲೇ ಹಲವು ಕಡೆಗಳಲ್ಲಿ ಕಳ್ಳಭಟ್ಟಿ ದಂಧೆ ಜೋರಾಗಿದೆ. ಹಾಗೆಯೇ ಮದ್ಯವಿಲ್ಲದೆ ಆತ್ಮಹತ್ಯೆ ಘಟನೆಗಳೂ ನಡೆಯುತ್ತಿವೆ. ಲಾಕ್ ಡೌನ್ ಜಾರಿಯಲ್ಲಿದ್ದರೂ ಮದ್ಯ ಮಾರಾಟಕ್ಕೆ ಅವಕಾಶ ನೀಡಲು ಚಿಂತನೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.
ಲಾಕ್ ಡೌನ್ ಹಿನ್ನೆಲೆಯಲ್ಲಿ ಸೀಮಿತ ಅವಧಿಯಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ಕೊಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಗಂಭೀರ ಚಿಂತನೆ ನಡೆದಿದೆ. ಈ ಬಗ್ಗೆ ಅಬಕಾರಿ ಇಲಾಕೆಯು ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಒಂದು ಮೂಲದ ಪ್ರಕಾರ ಏ.14 ರ ಬಳಿಕ ಲಾಕ್ ಡೌನ್ ವಿಸ್ತರಣೆಯಾದರೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಾತ್ರ ಮದ್ಯ ಮಾರಾಟಕ್ಕೆ ಅವಕಾಶ ಕೊಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
Comments