ಭಾರತದಲ್ಲಿ 26 ಸಾವಿರ ಗಡಿ ದಾಟಿದ ಕೊರೋನಾ ಸೋಂಕಿತರು ಸಾವಿನ ಸಂಖ್ಯೆ 824
ಇಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ದೇಶದಲ್ಲಿ 26 ಸಾವಿರ ಕೊರೋನಾ ವೈರಸ್ ಪ್ರಕರಣಗಳಿ ದೃಢಪಟ್ಟಿವೆ. ಈ ಪೈಕಿ 19,868 ಆಕ್ಟಿವ್ ಕೇಸ್ಗಳಿವೆ. 824 ಜನರು ಮೃತಪಟ್ಟಿದ್ದಾರೆ. 5,803 ಜನರು ಕೊರೋನಾ ಮುಕ್ತರಾಗಿ ಮನೆಗೆ ತೆರಳಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ರಾಜ್ಯಗಳಿಂದ ಸಂಗ್ರಹಿಸಿದ ಅಂಕಿ ಅಂಶಗಳ ಪ್ರಕಾರ ಶನಿವಾರ 46 ಸಾವಿನ ಪ್ರಕರಣಗಳು ವರದಿಯಾಗಿದ್ದು, ಮೃತಪಟ್ಟ ಸೋಂಕಿತರ ಸಂಖ್ಯೆ 824ಕ್ಕೇರಿದೆ. ಜಗತ್ತಿನ ಇತರೆ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದಲ್ಲಿ ಸೋಂಕು ಹರಡುವಿಕೆ ಪ್ರಮಾಣ ಕಡಿಮೆಯಿದೆ.ಅದರೆ ದೆಹಲಿ, ರಾಜಸ್ಥಾನ, ಮಧ್ಯಪ್ರದೇಶ, ತಮಿಳುನಾಡು, ಉತ್ತರ ಪ್ರದೇಶ, ಆಂಧ್ರಪ್ರದೇಶ, ತೆಲಂಗಾಣದಲ್ಲೂ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
Comments