ರಾಜ್ಯ ಸರ್ಕಾರದಿಂದ ರಾಜ್ಯದ ಹಸಿರು ವಲಯಗಳಲ್ಲಿರುವ ಜಿಲ್ಲೆಗಳಿಗೆ ಹೊಸ ಮಾರ್ಗಸೂಚಿ !

28 Apr 2020 2:48 PM | General
377 Report

ರಾಜ್ಯದಲ್ಲಿ ಕೊರೊನಾ ಆತಂಕದಿಂದ ಹಸಿರು ವಲಯಗಳಲ್ಲಿರುವ ಜಿಲ್ಲೆಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಲಾಕ್ ಡೌನ್ ನಿಂದ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಹಸಿರು ವಲಯದಲ್ಲಿ ಬರುವ 13 ಜಿಲ್ಲೆಗಳಲ್ಲಿ ಲಾಕ್ಡೌನ್ನನ್ನು ಸಡಿಲಿಕೆ ಮಾಡಲು ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಗೊಳಿಸಿದೆ.

ಚಾಮರಾಜನಗರ, ಕೊಪ್ಪಳ, ಚಿಕ್ಕಮಗಳೂರು, ರಾಯಚೂರು, ಚಿತ್ರದುರ್ಗ, ರಾಮನಗರ, ಹಾಸನ, ಶಿವಮೊಗ್ಗ, ಹಾವೇರಿ, ಯಾದಗಿರಿ, ಕೋಲಾರ, ದಾವಣಗೆರೆ, ಉಡುಪಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಲಾಕ್‌ಡೌನ್ ಸಡಿಲಿಸಲಾಗಿದೆ. ಈ ಜಿಲ್ಲೆಗಳಲ್ಲಿರುವ ವ್ಯಾಪಾರ, ವಹಿವಾಟಿಗೆ ಅವಕಾಶ ನೀಡಲಾಗುತ್ತಿದೆ. ವಿಶೇಷ ಆರ್ಥಿಕ ವಲಯ, ಕೈಗಾರಿಕಾ ವಲಯ, ಕೈಗಾರಿಕಾ ಟೌನ್ ಶಿಪ್, ರಫ್ತು ಆಧಾರಿತ ವಲಯಗಳಲ್ಲಿ ಕೆಲಸ ಮಾಡಲು ಕಾರ್ಮಿಕರಿಗೆ ಅವಕಾಶ ಮಾಡಿಕೊಡಬೇಕು. ಈ ಕಾರ್ಮಿಕರಿಗೆ ಕೆಲಸ ಮಾಡುವ ಸ್ಥಳದಲ್ಲೇ ತಂಗಲು ಅವಕಾಶ ಕಲ್ಪಿಸಬೇಕು. ಅಲ್ಲದೇ, ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಸೂಚಿಸಲಾಗಿದೆ. ಜೊತೆಗೆ ವಸತಿ ಸಮುಚ್ಛಯಗಳಲ್ಲಿ ಸಣ್ಣ ಅಂಗಡಿಗಳನ್ನು ತೆರೆಯಲು ಕೂಡಾ ಅವಕಾಶ ನೀಡಲಾಗಿದೆ. 

ಇನ್ನು ಕೆಂಪು ವಲಯ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳಾದ ಬೆಂಗಳೂರು ನಗರ, ಬೆಳಗಾವಿ, ಮೈಸೂರು, ವಿಜಯಪುರ, ಬಾಗಲಕೋಟೆ , ಕಲಬುರಗಿ, ಬೀದರ್ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

Edited By

venki swamy

Reported By

venki swamy

Comments