ಲಾಕ್ ಡೌನ್ ಮಧ್ಯೆ ಎಲ್ ಪಿಜಿ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ಏರಿಕೆ

01 Jun 2020 10:31 AM | General
458 Report

ಕೊರೊನಾವೈರಸ್ ಲಾಕ್‌ಡೌನ್ ಹಂತ ಹಂತವಾಗಿ ಹಿಂತೆಗೆದುಕೊಳ್ಳುತ್ತಿರುವ ಬೆನ್ನಲ್ಲೇ ಸಾಮಾನ್ಯ ಜನರಿಗೆ ದೊಡ್ಡ ಹಿನ್ನಡೆಯಾಗಿದೆ. ದೇಶೀಯ ಅಡುಗೆ ಅನಿಲ ಬೆಲೆಯನ್ನು ಹೆಚ್ಚಿಸಲಾಗಿದೆ. ಹೊಸ ದರಗಳು ಜೂನ್‌ 1ರಿಂದಲೇ ಜಾರಿಗೆ ಬರಲಿವೆ.

ಸಬ್ಸಿಡಿ ರಹಿತ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಸಿಲಿಂಡರ್‌ನ ಬೆಲೆಯನ್ನು ಇಂಡೇನ್ ಗ್ಯಾಸ್ ಸಿಲಿಂಡರ್‌ಗೆ 11.50 ರುಪಾಯಿ ಹೆಚ್ಚಿಸಲಾಗಿದೆ. ಇದು ಜೂನ್ 1 ರಿಂದ ಜಾರಿಯಾಗಿದೆ. ಮುಂಬರುವ ವಾರಗಳಲ್ಲಿ ಹೆಚ್ಚಿನ ಸಂಖ್ಯೆಯ ವ್ಯವಹಾರಗಳು ಪುನಾರಂಭಗೊಳ್ಳುವ ನಿರೀಕ್ಷೆಯ ಬೆನ್ನಲ್ಲೇ ಈ ಹೊಸ ದರಗಳು ಜಾರಿಗೆ ಬಂದಿವೆ.

ಇನ್ನು, ಈ ಹೊಸ ದರಗಳು ಪ್ರಧಾನ್ ಮಂತ್ರಿ ಉಜ್ವಲ ಯೋಜನೆಯ (ಪಿಎಂಯುವೈ) ಫಲಾನುಭವಿಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಸರ್ಕಾರಿ ಸ್ವಾಮ್ಯದ ತೈಲ ಮತ್ತು ಅನಿಲ ಕಂಪನಿ ಹೇಳಿದೆ. ಏಕೆಂದರೆ ಅವುಗಳು ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಯೋಜನೆಗೆ ಒಳಪಟ್ಟಿವೆ ಮತ್ತು ಜೂನ್ 30 ರವರೆಗೆ ಉಚಿತ ಸಿಲಿಂಡರ್‌ಗೆ ಅರ್ಹವಾಗಿವೆ.

Edited By

venki swamy

Reported By

venki swamy

Comments