ಹೊರ ರಾಜ್ಯಗಳಿಂದ ರಾಜ್ಯಕ್ಕೆ ಬರುವವರಿಗೆ ಕ್ವಾರಂಟೈನ್ ನಿಯಮದಲ್ಲಿ ಮತ್ತೆ ಬದಲಾವಣೆ

22 Jun 2020 1:21 PM | General
458 Report

ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ಅಟ್ಟಹಾಸ ಮುಂದುವರೆಸಿದ್ದು, ಬೇರೆ ರಾಜ್ಯಗಳಿಂದ ರಾಜ್ಯಕ್ಕೆ ಬರುತ್ತಿರುವವರಲ್ಲೇ ಕೊರೊನಾ ಸೋಂಕು ಹೆಚ್ಚಾಗಿ ಕಂಡುಬರುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಕ್ವಾರಂಟೈನ್ ನಿಯಮವನ್ನು ಬದಲಾವಣೆ ಮಾಡಿದ್ದು, ಕ್ವಾರಂಟೈನ್ ಅವಯನ್ನು 7 ದಿನಗಳಿಗೆ ಬದಲಾಗಿ 14 ದಿನಗಳಿಗೆ ಹೆಚ್ಚಿಸಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರು ಹಾಗೂ ಮೃತರ ಸಂಖ್ಯೆ ಹೆಚ್ಚಾಗುತ್ತಲೇ. ಕೋವಿಡ್-19 ನಿಯಂತ್ರಣಕ್ಕೆ ಸಿಗದೆ ಕಳೆದ ಕೆಲ ದಿನಗಳಿಂದ ಪ್ರತಿನಿತ್ಯವೂ 200ಕ್ಕೂ ಹೆಚ್ಚು ಜನರಿಗೆ ಸೋಂಕು ಪತ್ತೆಯಾಗುತ್ತಿದೆ. ಭಾನುವಾರವಷ್ಟೇ 453 ಜನರಿಗೆ ಸೋಂಕು ದೃಢಪಟ್ಟಿತ್ತು. ಇದರಿಂದಾಗಿ ಎಚ್ಚೆತ್ತ ರಾಜ್ಯ ಸರ್ಕಾರ ಕ್ವಾರಂಟೈನ್ ಅವಧಿಯನ್ನು ಮತ್ತೆ ವಿಸ್ತರಣೆ ಮಾಡಿದೆ.

ರಾಜ್ಯದಲ್ಲಿ ಸೋಂಕಿತರನ್ನು ಪತ್ತೆ ಹಚ್ಚುವ ಕಾರ್ಯ ಬಿರುಸಿನಿಂದ ಕೈಗೊಳ್ಳಲಾಗಿದೆ, ಹೊರ ರಾಜ್ಯಗಳಿಂದ ಬರುವವರನ್ನು ಪರೀಕ್ಷೆಗೊಳಪಡಿಸಿ 24 ಗಂಟೆಯೊಳಗಾಗಿ ಸೋಂಕು ಇದೆಯೇ, ಇಲ್ಲವೇ ಎಂಬುದನ್ನು ಪತ್ತೆಹಚ್ಚಲಾಗುತ್ತಿದೆ.

Edited By

venki swamy

Reported By

venki swamy

Comments