ಸಂಕಷ್ಟದಲ್ಲಿ ಕನ್ನಡ ಚಿತ್ರರಂಗ ಇಂದು ಶಿವರಾಜ್ ಕುಮಾರ್ ನೇತೃತ್ವದಲ್ಲಿ ಸಭೆ !

24 Jul 2020 10:38 AM | General
45 Report

ದೇಶದಲ್ಲಿ ಕೊರೋನಾ ಸೋಂಕಿನಿಂದ ಚಿತ್ರರಂಗ ಕಳೆದ ನಾಲ್ಕು ತಿಂಗಳಿಂದ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದೆ. ಚಿತ್ರರಂಗ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಇಂದು ಚಿತ್ರರಂಗದ ಸಂಬಂದ ಮಧ್ಯಾಹ್ನ ಸುಮಾರು 12:30ಕ್ಕೆ ನಾಗವಾರದ ಶಿವರಾಜ್ ಕುಮಾರ್ ಮನೆಯಲ್ಲಿ ಮಹತ್ವದ ಸಭೆ ನಡೆಯಲಿದೆ.

ಶಿವಣ್ಣನ ಮನೆಯಲ್ಲಿ ಸಭೆ ನಡೆದ ನಂತರ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಸರ್ಕಾರದ ಮುಂದೆ ತಮ್ಮ ಬೇಡಿಕೆಯನ್ನಿಡುವ ಸಾಧ್ಯತೆ ಇದೆ. ಸಭೆಯಲ್ಲಿ ಕಲಾವಿದರು, ತಂತ್ರಜ್ಞರು, ನಿರ್ಮಾಪಕರು, ಚಿತ್ರಮಂದಿರದ ಮಾಲೀಕರು ಮತ್ತು ವಾಣಿಜ್ಯ ಮಂಡಳಿಯ ಅಧ್ಯಕ್ಷರು ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

Edited By

venki swamy

Reported By

venki swamy

Comments