ಶಿರಾ ಕ್ಷೇತ್ರದ ಮಾಜಿ ಸಚಿವ ಜೆಡಿಎಸ್ ಶಾಸಕ ಬಿ ಸತ್ಯನಾರಾಯಣ ನಿಧನ

04 Aug 2020 1:44 PM | General
508 Report

ಶಿರಾದ ಮಾಜಿ ಸಚಿವ ಜೆಡಿಎಸ್ ಶಾಸಕ ಬಿ. ಸತ್ಯನಾರಾಯಣ ಅವರು ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಸತ್ಯನಾರಾಯಣ ಅವರ ಆರೋಗ್ಯ ಸ್ಥಿತಿ ಗಂಭೀರಗೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ 12.20 ಕ್ಕೆ ಕೊನೆಯುಸಿರೆಳೆದಿದ್ದಾರೆ.

ಮಾಜಿ ಸಚಿವ ಮತ್ತು ಶಾಸಕರು ಹಾಗೂ ನನ್ನ ಸನ್ಮಿತ್ರರು ಆದ ಬಿ. ಸತ್ಯನಾರಾಯಣ್ ಅವರ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ ಸತ್ಯನಾರಾಯಣ್ ಮತ್ತು ನನ್ನ ಸ್ನೇಹ ಸುಮಾರು 3 ದಶಕಗಳದ್ದು ಅವರಿಲ್ಲದ ದಿನಗಳನ್ನು ನೆನೆಯಲು ನನ್ನಿಂದ ಸಾಧ್ಯವೇಇಲ್ಲ . ಸತ್ಯನಾರಾಯಣ್ ಅವರು ತುಂಬಾ ಮೃದು ಸ್ವಭಾವದವರು ಅವರ ಅಗಲಿಕೆಯಿಂದ ನಮ್ಮ ನಾಡಿಗೆ ತುಂಬಲಾಗದ ನಷ್ಟ ಉಂಟಾಗಿದೆ. ಮೃತರ ಆತ್ಮಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ತುಂಬಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೀನಿ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ತಮ್ಮ ಶೋಕ ಸಂದೇಶದಲ್ಲಿ ತಿಳಸಿದ್ದಾರೆ.

1994ರಲ್ಲಿ ಜನತಾದಳದಿಂದ ಮೊದಲ ಬಾರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಜಯಶೀಲರಾದ ಬಿ.ಸತ್ಯನಾರಾಯಣ ಅವರು 1996ರಲ್ಲಿ ಜೆ.ಎಚ್.ಪಟೇಲರ ಸಂಪುಟದಲ್ಲಿ ಕಾರ್ಮಿಕ ಸಚಿವರಾಗಿದ್ದರು. ಜತೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೂಡ ಆಗಿದ್ದರು.

1999ರ ಚುನಾವಣೆಯಲ್ಲಿ ಸೋತ ಸತ್ಯನಾರಾಯಣ 2004ರಲ್ಲಿ ಮತ್ತೆ ವಿಧಾನಸಭೆ ಪ್ರವೇಶಿಸಿದರು. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಧರ್ಮಸಿಂಗ್ ಸಂಪುಟದಲ್ಲಿ ಮಂತ್ರಿಯಾದರು.

2008, 2013ರ ಚುನಾವಣೆಯಲ್ಲಿ ಸತತ ಸೋಲು ಅನುಭವಿಸಿದರು. 2019ರಲ್ಲಿ ಮತ್ತೆ ಜಯಗಳಿಸಿದರು. ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಸತ್ಯನಾರಾಯಣ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

 

Edited By

venki swamy

Reported By

venki swamy

Comments