ಸರ್ಕಾರಿ ಶಾಲೆಗಳಲ್ಲೂ ಎಲ್ಕೆಜಿ, ಯುಕೆಜಿ ಶಿಕ್ಷಣ ನೀಡಲು ನಿರ್ಧಾರ
ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ಆರಂಭಿಸಲು ತೀರ್ಮಾನಿಸಿರುವ ರಾಜ್ಯ ಸರ್ಕಾರ, ಮೊದಲ ಹಂತದಲ್ಲಿ 275 ಪಬ್ಲಿಕ್ ಶಾಲೆಗಳಲ್ಲಿ ಪ್ರಾರಂಭಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
ಮುಂದಿನ ವರ್ಷಗಳಲ್ಲಿ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಶಿಕ್ಷಣ ನೀಡುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ. ಪಬ್ಲಿಕ್ ಶಾಲೆಗಳಲ್ಲಿ ಆರಂಭಿಸುವ ಎಲ್‌ಕೆಜಿ, ಯುಕೆಜಿ ಶಿಕ್ಷಕರಿಗೆ 7,500 ರೂಪಾಯಿ, ಸಹಾಯಕಿಯರಿಗೆ 5 ಸಾವಿರ ರೂಪಾಯಿ ಗೌರವ ಸಂಭಾವನೆ ನೀಡಲು ನಿರ್ಧರಿಸಲಾಗಿದೆ. ಮಕ್ಕಳಿಗೆ ಶಿಕ್ಷಣ ನೀಡಲು ಡಿಇಡಿ, ಬಿ.ಇಡಿ ಆದವರಿಗೆ ಮಾಂಟೆಸರಿ ತರಬೇತಿ ನೀಡಲಾಗುತ್ತಿದೆ. ಸರ್ಕಾರಿ ಶಾಲಾ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸರ್ಕಾರ ಈ ತೀರ್ಮಾನ ತೆಗೆದುಕೊಂಡಿದೆ ಎಂದು ಮಾಹಿತಿ ನೀಡಿದರು.
Comments