ಡ್ರಗ್ಸ್ ಕೇಸ್: ಮಾಧ್ಯಮಗಳಿಗೆ ಆಂಕರ್ ಅನುಶ್ರೀ ಮನವಿ

25 Sep 2020 11:52 AM | General
252 Report

ನಟಿ, ನಿರೂಪಕಿ ಅನುಶ್ರೀ ಅವರಿಗೆ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಸಿಸಿಬಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಈ ಕುರಿತು ಅನುಶ್ರೀ ಕೂಡ ಸ್ಪಷ್ಟನೆ ಕೊಟ್ಟಿದ್ದಾರೆ. ಇದೀಗ ಮಾಧ್ಯಮಗಳಲ್ಲಿ ಅನುಶ್ರೀ ಮನವಿವೊಂದನ್ನು ಮಾಡಿಕೊಂಡಿದ್ದಾರೆ.

ಫೇಸ್​ಬುಕ್​ ಖಾತೆಯಲ್ಲಿ ಮಾಧ್ಯಮದವರಿಗೆ ಮನವಿ ಮಾಡಿಕೊಂಡು ಪತ್ರವನ್ನು ಹಾಕಿದ್ದಾರೆ ಅನುಶ್ರೀ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿಗೆ ಪ್ರಯಾಣ ಬೆಳೆಸಿರುವ ನಿರೂಪಕಿ, ಈ ನಡುವೆಯೇ ಮಾಧ್ಯಮದವರಿಗೆ ತನ್ನನ್ನು ಅಪರಾಧಿಯಂತೆ ಬಿಂಬಿಸಬೇಡಿ ಎಂದಿದ್ದಾರೆ. ಗುರುವಾರ ಸಂಜೆ ನನಗೆ ಮಂಗಳೂರಿನಲ್ಲಿ ಸಿಸಿಬಿ ಕಚೇರಿಯಿಂದ ವಿಚಾರಣೆಗೆ ಹಾಜರಾಗಲು ಒಂದು ನೋಟಿಸ್ ಜಾರಿ ಮಾಡಿದ್ದಾರೆ. ಹೀಗಾಗಿ ಇಂದು ಬೆಳಗ್ಗೆ 11 ಗಂಟೆಗೆ ನಾನು ಸ್ವತಃ ಮಂಗಳೂರಿಗೆ ತೆರಳಿ ಆ ವಿಚಾರಣೆಗೆ ಖುದ್ದಾಗಿ ಹಾಜರಾಗುತ್ತಿದ್ದೇನೆ ಎಂದು ತಿಳಿಸಿದ್ದಾರೆ.

Edited By

venki swamy

Reported By

venki swamy

Comments