ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ನೇಮಕ

28 Sep 2020 8:06 PM | General
280 Report

ಕಳೆದ ಒಂದು ತಿಂಗಳ ಹಿಂದಷ್ಟೇ ಜಿಲ್ಲೆಗೆ ಆಗಮಿಸಿದ್ದ ಜಿಲ್ಲಾಧಿಕಾರಿ ಬಿ.ಶರತ್ ಅವರನ್ನ ಒಂದೇ ತಿಂಗಳಲ್ಲಿ  ಸರ್ಕಾರ ವರ್ಗಾವಣೆಗೊಳಿಸಿ ಆದೇಶಿಸಿದೆ. ವಿಶ್ವವಿಖ್ಯಾತ ದಸರಾಗೆ ಅರಮನೆ ನಗರಿ ಸಜ್ಜಾಗುತ್ತಿರುವ ವೇಳೆ ಜಿಲ್ಲಾಧಿಕಾರಿ ಬದಲಾವಣೆ ಮಾಡಿದೆ, ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿಗೆ ಜವಾಬ್ದಾರಿ ಮಾಡಲಾಗಿದೆ.

ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತರಾಗಿದ್ದ ರೋಹಿಣಿ ಅವರು ಅದಕ್ಕೂ ಮೊದಲು ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ನಿರ್ದೇಶನಾಲಯದ ಆಯುಕ್ತರಾಗಿದ್ದರು. ಒಂದು ತಿಂಗಳ ಹಿಂದೆ ಶರತ್ ಮೈಸೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದರು. ಆದ್ರೆ ಕಳೆದ ಒಂದು ತಿಂಗಳಿನಿಂದ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಂಕಿನ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಯಾವುದೇ ಪ್ಲಾನ್ ಮಾಡಿಕೊಂಡಿರಲಿಲ್ಲ. ಸಾವಿನ ಸಂಖ್ಯೆ, ಪಾಸಿಟಿವ್ ಸಂಖ್ಯೆ ಹೆಚ್ಚುತ್ತಿದ್ದರೂ ತಾತ್ಕಾಲಿಕವಾಗಿ ಆಸ್ಪತ್ರೆ ತೆರೆಯಲು ಜಿಲ್ಲಾಧಿಕಾರಿ ಶರತ್ ಮುಂದಾಗಿರಲಿಲ್ಲ. ಕೊರೊನಾ ಏರಿಕೆ ನಡುವೆ ಅತಿ ಸರಳ ದಸರಾ ಆಚರಣೆ ಸರ್ಕಾರಕ್ಕೆ ದೊಡ್ಡ ಸವಾಲು ಆಗಿದೆ. ಆದ್ರೆ ಇದುವರೆಗೂ ಜಿಲ್ಲಾಧಿಕಾರಿ ದಸರಾ ಆಚರಣೆ ಯೋಜನೆಯನ್ನ ಸರ್ಕಾರಕ್ಕೆ ಸಲ್ಲಿಸದ ಹಿನ್ನೆಲೆ ಶರತ್ ಅವರ ವರ್ಗಾವಣೆ ಆಗಿದೆ ಎಂದು ತಿಳಿದು ಬಂದಿದೆ.

Edited By

venki swamy

Reported By

venki swamy

Comments