ಮಾಸ್ಕ್ ದಂಡ ಪ್ರಮಾಣವನ್ನು 1000ರೂ ನಿಂದ 250ಕ್ಕೆ ಇಳಿಸಿದ ಸರ್ಕಾರ
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಯಲು ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಯೊಬ್ಬರು ಮಾಸ್ಕ್ ಧರಿಸುವುದು ಕಡ್ಡಾಯ. ಇಲ್ಲದಿದ್ದಲ್ಲಿ ನಗರದಲ್ಲಿ 1000 ರೂ, ಗ್ರಾಮೀಣ ಪ್ರದೇಶದಲ್ಲಿ 500 ರೂ ದಂಡ ವಿಧಿಸುವುದಾಗಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತು.
ಸರ್ಕಾರದ ಸೂಚನೆಯಂತೆ ಫೀಲ್ಡಿಗಿಳಿದಿರುವ ಮಾರ್ಷಲ್ಸ್ ಮತ್ತು ಪೊಲೀಸರು ಮಾಸ್ಕ್ ಹಾಕದವರಿಂದ ದಂಡ ವಸೂಲಿ ಮಾಡುತ್ತಿದ್ದಾರೆ. ದುಬಾರಿ ದಂಡಕ್ಕೆ ರಾಜ್ಯದೆಲ್ಲೆಡೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು, ಜನಸಾಮಾನ್ಯರಿಂದ ಜನಪ್ರತಿನಿಧಿಗಳವರೆಗೆ ವಿರೋಧ ವ್ಯಕ್ತಪಡಿಸಿದ್ದವು. ರಾಜ್ಯ ಸರ್ಕಾರ ವಿರೋಧ ಮತ್ತು ತಜ್ಞರ ಅಭಿಪ್ರಾಯದ ಹಿನ್ನೆಲೆಯಲ್ಲಿ ದಂಡದ ಪ್ರಮಾಣವನ್ನು ನಗರ ಪ್ರದೇಶದಲ್ಲಿ 250 ಮತ್ತು ಗ್ರಾಮೀಣ ಪ್ರದೇಶದಲ್ಲಿ 100ಕ್ಕೆ ಇಳಿಸಲು ತೀರ್ಮಾನಿಸಲಾಗಿದೆ.
Comments