ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

23 Oct 2020 3:31 PM | General
110 Report

ಭಾರತಕ್ಕೆ ಚೊಚ್ಚಲ ವಿಶ್ವಕಪ್ ಗೆಲ್ಲಿಸಿಕೊಟ್ಟಿದ್ದ ಮಾಜಿ ನಾಯಕ ಕಪಿಲ್ ದೇವ್ಗೆ ಹೃದಯಾಘಾತವಾಗಿದೆ. ಅವರಿಗೆ ದೆಹಲಿಯ ಆಸ್ಪತ್ರೆಯಲ್ಲಿ ಆ್ಯಾಂಜಿಯೋಪ್ಲ್ಯಾಸ್ಟಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಮಾಜಿ ನಾಯಕ ಕಪಿಲ್ ದೇವ್ಗೆ ತೀವ್ರ ಎದೆನೋವಿನಿಂದ ಬಳಲಿದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅವರಿಗೆ ಆಯಂಜಿಯೊಪ್ಲಾಸ್ಟಿ ಮಾಡಲಾಗುತ್ತಿದೆ ಎಂದು ಹಲವು ರಾಷ್ಟ್ರೀಯ ಜಾಲತಾಣಗಳು ವರದಿ ಮಾಡಿವೆ.

ಟೀಂ ಇಂಡಿಯಾ ಪರ 131 ಟೆಸ್ಟ್ ಪಂದ್ಯಗಳನ್ನು ಆಡಿರುವ ಕಪಿಲ್ ದೇವ್ ಅವರು, 5,248 ರನ್ ಗಳಿಸಿದ್ದು, 8 ಶತಕಗಳನ್ನು ಸಿಡಿಸಿದ್ದಾರೆ. 225 ಏಕದಿನ ಪಂದ್ಯಗಳಲ್ಲಿ 3,783 ರನ್ ಗಳಿಸಿದ್ದಾರೆ. ಅಲ್ಲದೇ ಟೆಸ್ಟ್ ನಲ್ಲಿ 434 ವಿಕೆಟ್, ಏಕದಿನ ಮಾದರಿ ಕ್ರಿಕೆಟ್‍ನಲ್ಲಿ 253 ವಿಕೆಟ್ ಪಡೆದುಕೊಂಡಿದ್ದಾರೆ. 1959 ಜನವರಿ 6 ರಂದು ಚತ್ತೀಸ್‍ಗಢದಲ್ಲಿ ಜನಿಸಿದ್ದ ಅವರು, 1978 ರ ಅಕ್ಟೋವರ್ ನಲ್ಲಿ ಪಾಕಿಸ್ತಾನ ವಿರುದ್ಧ ಟೆಸ್ಟ್ ಕ್ರಿಕೆಟ್‍ಗೆ ಪಾದಾರ್ಪಣೆ ಮಾಡಿದ್ದರು.

Edited By

venki swamy

Reported By

venki swamy

Comments