ಸರ್ಕಾರಿ ನೌಕರರು ಇನ್ಮುಂದೆ ಸಿನಿಮಾ, ಟಿವಿಯಲ್ಲಿ ನಟಿಸುವಂತಿಲ್ಲ!

31 Oct 2020 11:37 AM | General
299 Report

ಸರ್ಕಾರಿ ನೌಕರರು ಚಲನಚಿತ್ರಗಳು ಮತ್ತು ದೂರದರ್ಶನ ಕಾರ್ಯಕ್ರಮಗಳಲ್ಲಿ ನಟಿಸುವುದನ್ನು ನಿಷೇಧಿಸುವುದಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದೆ. ಈ ಬಗ್ಗೆ ಕಳೆದ ಅಕ್ಟೋಬರ್ 27 ರಂದು ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ (ನಡವಳಿಕೆ) ನಿಯಮಗಳು 2020ರ ಕರಡು ಪ್ರತಿಯನ್ನು ಪ್ರಕಟಿಸಿದೆ. ಈ ಕರಡು ಪ್ರತಿಯಲ್ಲಿ ಸರ್ಕಾರಿ ನೌಕರರು ಯಾವುದನ್ನು ಮಾಡಬೇಕು? ಯಾವುದನ್ನು ಮಾಡಬಾರದು ಎಂಬುದರ ಕುರಿತು ಕರ್ನಾಟಕ ರಾಜ್ಯಪತ್ರದಲ್ಲಿ ಕರಡು ನಿಯಮಾವಳಿಗಳನ್ನು ಪ್ರಕಟ ಮಾಡಿದ್ದು, ಸಾರ್ವಜನಿಕರು ತಮ್ಮ ಅಭಿಪ್ರಾಯ ತಿಳಿಸುವಂತೆ ಮನವಿ ಮಾಡಿದೆ.

ಸರ್ಕಾರಿ ನೌಕರರು ಸಂಬಂಧಿತ ಪ್ರಾಧಿಕಾರದ ಅನುಮತಿಯನ್ನು ಪಡೆಯದೆ ಪತ್ರಿಕೆ ಅಥವಾ ನಿಯತಕಾಲಿಕೆಗಳ ಸಂಪಾದನೆ, ಪ್ರಕಟಣೆ, ನಿರ್ವಹಣೆಯಲ್ಲಿ ತೊಡಗಿಕೊಳ್ಳಬಾರದು. ರೇಡಿಯೋ, ಟಿವಿ ಸೇರಿದಂತೆ ಯಾವುದೇ ಪ್ರಾಯೋಜಿತ ಮಾಧ್ಯಮ ಕಾರ್ಯಕ್ರಮಗಳಲ್ಲಿ ಮತ್ತು ಸರ್ಕಾರಿ ಮಾಧ್ಯಮದಲ್ಲಿನ ಹೊರಗಿನಿಂದ ನಿರ್ಮಾಣವಾದ ಕಾರ್ಯಕ್ರಮಗಳಲ್ಲಿ ಭಾಗವಹಿಸಬಾರದು ಎಂದು ಹೇಳಲಾಗಿದೆ. ಕರಡು ನಿಯಮ ಕಾಯ್ದೆಯಾಗಿ ಜಾರಿಯಾದ ಬಳಿಕ ಸರ್ಕಾರಿ ನೌಕರರು ಯಾವುದೇ ಪುಸ್ತಕವನ್ನು ಪ್ರಕಟಿಸುವುದು ಅಥವಾ ಯಾವುದೇ ರೀತಿಯ ಸಾಹಿತ್ಯಿಕ ಅಥವಾ ಕಲಾತ್ಮಕ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದನ್ನು ನಿಯಮಾವಳಿ ನಿಷೇಧಿಸಿದೆ.

Edited By

venki swamy

Reported By

venki swamy

Comments