ಮುಂದಿನ 2 ವರ್ಷದಲ್ಲಿ ಟೋಲ್ ಮುಕ್ತ ಭಾರತ: ನಿತಿನ್ ಗಡ್ಕರಿ
ಜಿಪಿಎಸ್ ಆಧಾರಿತ ಶುಲ್ಕ ವಸೂತಿ ಪದ್ಧತಿ ಜಾರಿಗೆ ಬರಲಿದ್ದು, ಈ ಮೂಲಕ ದೇಶದಲ್ಲಿ ಜಾರಿಯಲ್ಲಿರುವ ಟೋಲ್ ಪದ್ಧತಿ ಹೋಗಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ದೇಶಾದ್ಯಂತ ಹೆದ್ದಾರಿಗಳಲ್ಲಿ ತಡೆರಹಿತ ಸಂಚಾರಕ್ಕೆ ಅವಕಾಶ ಕಲ್ಪಿಸಲು ಟೋಲ್ ಸಂಗ್ರಹಕ್ಕೆ ಜಿಪಿಎಸ್ ಆಧಾರಿತ ತಂತ್ರಜ್ಞಾನವನ್ನು ಅಳವಡಿಸಲು ನಿರ್ಧರಿಸಲಾಗಿದೆ. ಟೋಲ್ ಬೂತ್ನಲ್ಲಿ ಕಟ್ಟಬೇಕಾದ ಶುಲ್ಕವನ್ನು ಮುಂದಿನ ದಿನಗಳಲ್ಲಿ ಚಾಲಕರ ಬ್ಯಾಂಕ್ ಖಾತೆಯಿಂದಲೇ ಕಡಿತಗೊಳಿಸಲಾಗುತ್ತದೆ. ಇನ್ನೆರಡು ವರ್ಷಗಳಲ್ಲಿ ಇದು ಸಂಪೂರ್ಣವಾಗಿ ಕಾರ್ಯರೂಪಕ್ಕೆ ಬರಲಿದೆ ಎಂದು ತಿಳಿಸಿದ್ದಾರೆ.
ರಷ್ಯಾ ಸರ್ಕಾರದ ಸಹಾಯದೊಂದಿಗೆ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಜಾರಿಗೊಳಿಸುವ ಬಗ್ಗೆ ವಿಸ್ತೃತ ಪರೀಕ್ಷೆ ನಡೆಸಲಾಗಿದ್ದು ಯೋಜನೆ ಅಂತಿಮಗೊಳಿಸಲಾಗಿದೆ. ಮುಂದಿನ ಎರಡು ವರ್ಷಗಳಲ್ಲಿ ಭಾರತವು ಟೋಲ್ ಬೂತ್ ರಹಿತ ಹೆದ್ದಾರಿಗಳನ್ನು ಹೊಂದಲಿದೆ. ಜಿಪಿಎಸ್ ವ್ಯವಸ್ಥೆ ಮೂಲಕ ವಾಹನಗಳನ್ನು ಟ್ರ್ಯಾಕ್ ಮಾಡಲಾಗುವುದು. ವಾಹನ ಮಾಲೀಕರ ಬ್ಯಾಂಕ್ ಖಾತೆಯಿಂದ ಬಾಕಿ ಟೋಲ್ ಹಣ ಸಂದಾಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.
Comments