ಸೂಪರ್ಸ್ಟಾರ್ ರಜಿನಿಕಾಂತ್ ಆಸ್ಪತ್ರೆಗೆ ದಾಖಲು
![](https://www.civicnews.in/admin/news_images/14041608890124.jpeg)
ಚಿತ್ರರಂಗದಿಂದ ರಾಜಕೀಯ ಅಂಗಳಕ್ಕೆ ಧುಮುಕಿ ಸಂಚಲನ ಸೃಷ್ಟಿಸಿರುವ ಸೂಪರ್ ಸ್ಟಾರ್ ರಜನಿಕಾಂತ್ ಇಂದು ಬೆಳಗ್ಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಟ ರಜನಿಕಾಂತ್ ಅವರ ರಕ್ತದೊತ್ತಡದಲ್ಲಿ ತೀವ್ರ ಏರಿಳಿತ ಉಂಟಾಗಿದ್ದು, ಅವರನ್ನು ಹೈದರಾಬಾದ್ ನ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ರಜನಿಕಾಂತ್ ಅವರ 'ಅನ್ನಾತೆ' ಚಿತ್ರದ ಶೂಟಿಂಗ್ ಹೈದ್ರಾಬಾದ್ ನಲ್ಲಿ ನಡೆಯುತ್ತಿದ್ದು, ಶೂಟಿಂಗ್ ಸೆಟ್ ನಲ್ಲಿ ಹಲವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸದ್ಯ ಶೂಟಿಂಗ್ ತಾತ್ಕಾಲಿಕ ಸ್ಥಗಿತಗೊಂಡಿದೆ.
ಇಷ್ಟಕ್ಕೂ ರಜನಿಕಾಂತ್ ಅವರಿಗೆ ತುರ್ತಾಗಿ ಚಿತ್ರ ಮುಗಿಸುವುದಕ್ಕೂ ಒಂದು ಕಾರಣವಿದೆ. ಮುಂದಿನ ವರ್ಷ ತಮಿಳುನಾಡಿನಲ್ಲಿ ಚುನಾವಣೆಗಳು ನಡೆಯಲಿದ್ದು, ಅದರಲ್ಲಿ ರಜನಿಕಾಂತ್ ಅವರ ರಾಜಕೀಯ ಪಕ್ಷ ಸಹ ಸ್ಪರ್ಧಿಸಲಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಒಪ್ಪಿಕೊಂಡಿರುವ 'ಅಣ್ಣಾತ್ತೆ' ಚಿತ್ರದ ಚಿತ್ರೀಕರಣವನ್ನು ಆದಷ್ಟು ಬೇಗ ಮುಗಿಸುವುದು ಅವರ ಯೋಚನೆ. ಆದರೆ, ಇದೀಗ ಚಿತ್ರ ಮುಗಿಯುವುದು ಇನ್ನಷ್ಟು ತಡವಾಗಲಿದೆ.
Comments