ಮಹಾರಾಷ್ಟ್ರದಲ್ಲಿ ತಡರಾತ್ರಿ 3.5ರಷ್ಟು ತೀವ್ರತೆಯ ಭೂಕಂಪ

18 Jan 2021 11:52 AM | General
287 Report

ಮಹಾರಾಷ್ಟ್ರದಲ್ಲಿ ಕಳೆದ ರಾತ್ರಿ 10.45 ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ವರದಿಯಾಗಿದೆ. ನ್ಯಾಷನಲ್ ಸೆಂಟರ್ ಫಾರ್ ಸೆಸ್ಮಾಲಜಿ ನೀಡಿರುವ ಮಾಹಿತಿ ಪ್ರಕಾರ, ನಿನ್ನೆ ರಾತ್ರಿ ಮಹಾರಾಷ್ಟ್ರದ ಹಲವು ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದ್ದು, ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆ ದಾಖಲಾಗಿದೆ ಎಂದು ತಿಳಿಸಿದೆ.

ಇದರಲ್ಲಿ ಯಾವುದೇ ಪ್ರಾಣ ಹಾನಿಯಾಗಲಿ ಆಸ್ತಿ ಹಾನಿ ಸಂಭವಿಸಿಲ್ಲ. 'ಪಾಲ್ಗರ್‌ ಜಿಲ್ಲೆಯಲ್ಲಿ ಭಾನುವಾರ ರಾತ್ರಿ 10 ಗಂಟೆಗೆ ಭೂಮಿ ಕಂಪಿಸಿದೆ' ಎಂದು ಜಿಲ್ಲಾ ವಿಪತ್ತು ನಿಯಂತ್ರಣ ಕೇಂದ್ರದ ಮುಖ್ಯಸ್ಥ ವಿವೇಕಾನಂದ ಕದಂ ಅವರು ಹೇಳಿದರು.

Edited By

venki swamy

Reported By

venki swamy

Comments