ಪುಣೆಯ ಕರೊನಾ ಲಸಿಕೆ ಉತ್ಪಾದನಾ ಕೇಂದ್ರಕ್ಕೇ ಬೆಂಕಿ

21 Jan 2021 6:04 PM | General
291 Report

ಭಾರತದಲ್ಲಿ ತುರ್ತು ಬಳಕೆಗೆ ಅನುಮತಿ ಪಡೆದಿರುವ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದ ಲಸಿಕೆ ಕೋವಿಶೀಲ್ಡ್ನ ತಯಾರಕ ಸಂಸ್ಥೆ ಪುಣೆಯ ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಸಂಕೀರ್ಣದಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಪುಣೆಯ ಮಂಜಿರಾ ಪ್ರದೇಶದಲ್ಲಿರುವ ಇನ್‌ಸ್ಟಿಟ್ಯೂಟ್​ನ ಟರ್ಮಿನಲ್ ಗೇಟ್-1 ಒಳಗಿನ SEZ-3 ಕಟ್ಟಡದ ನಾಲ್ಕನೇ ಮತ್ತು ಐದನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು 10 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ. ಬೆಂಕಿ ತಗುಲಲು ಕಾರಣವೇನು ಎಂಬುದು ಇನ್ನೂ ತಿಳಿದು ಬಂದಿಲ್ಲ. ಬೆಂಕಿ ಕಾಣಿಸಿಕೊಂಡಿರುವ ಕಟ್ಟಡ ನಿರ್ಮಾಣ ಹಂತದಲ್ಲಿದ್ದರಿಂದಾಗಿ ಅಲ್ಲಿ ಲಸಿಕೆ ಉತ್ಪಾದನೆಯಾಗಲೀ ಅಥವಾ ಶೇಖರಣೆಯನ್ನು ಮಾಡಿರಲಿಲ್ಲ ಎನ್ನಲಾಗಿದೆ. ಹಾಗಾಗಿ ಲಸಿಕೆಗೆ ಯಾವುದೇ ತೊಂದರೆಯಾಗಿಲ್ಲ ಎಂದು ತಿಳಿಸಲಾಗಿದೆ.

Edited By

venki swamy

Reported By

venki swamy

Comments