ಮಾಜಿ ಬಿಗ್ ಬಾಸ್ ಸ್ಪರ್ಧಿ ಕಲ್ಯಾಣ ಕಲಹ: ಮೊದಲ ದಿನವೇ ಪೊಲೀಸ್ ಠಾಣೆ ಮೆಟ್ಟಿಲೇರಿದ ನವದಂಪತಿ

29 Mar 2021 4:38 PM | General
632 Report

ಬಿಗ್ ಬಾಸ್ ಮಾಜಿ ಸ್ಪರ್ಧಿ ಚೈತ್ರಾ ಕೋಟೂರ್ ಅವರು ಕನ್ಸ್ಟ್ರಕ್ಷನ್ ಮತ್ತು ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ನಾಗಾರ್ಜುನ್ ಎಂಬುವವರ ಜೊತೆ ಭಾನುವಾರ (ಮಾ.28) ಬೆಳಗ್ಗೆ ಸಿಂಪಲ್ ಆಗಿ ಮದುವೆ ಆಗಿದ್ದರು. ಆದರೆ ವಿವಾಹವಾಗಿ ಕೆಲವೇ ಗಂಟೆಗಳು ಕಳೆಯುವುದರೊಳಗೆ ಅವರ ವಿವಾಹ ವಿಚಾರ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

ನಾಗಾರ್ಜುನ್ ಹಾಗೂ ಚೈತ್ರಾ ಪ್ರೀತಿಸುತ್ತಿದ್ದರು. ಪರಸ್ಪರ ಒಪ್ಪಿಗೆಯ ಮೂಲಕವೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಮದುವೆ ನಂತರ ನಾಗಾರ್ಜುನ್ ಉಲ್ಟಾ ಹೊಡೆದಿದ್ದಾರೆ. 'ನನಗೆ ಚೈತ್ರಾ ಅವರನ್ನು ಮದುವೆಯಾಗಲು ಇಷ್ಟವಿರಲಿಲ್ಲ. ಆದರೆ, ಕೆಲ ಸಂಘಟನೆಗಳ ಸದಸ್ಯರು ನನ್ನನ್ನು ಗೃಹ ಬಂಧನದಲ್ಲಿಟ್ಟು ಬೆದರಿಸಿ ಬಲವಂತವಾಗಿ ಅವರೊಂದಿಗೆ ಮದುವೆ ಮಾಡಿಸಿದ್ದಾರೆ' ಎಂದು ನಾಗಾರ್ಜುನ್‌ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ.

Edited By

venki swamy

Reported By

venki swamy

Comments