ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಮತ್ತು ಪತ್ನಿ ಚನ್ನಮ್ಮಗೆ ಕೊರೊನಾ ಪಾಸಿಟಿವ್

31 Mar 2021 1:38 PM | General
894 Report

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರಿಗೆ ಹಾಗೂ ಅವರ ಪತ್ನಿಗೆ ಕೊರೊನಾ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೆಚ್​.ಡಿ.ದೇವೇಗೌಡ ಅವರಿಗೆ 87ರ ವರ್ಷವಾಗಿದೆ. ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ಡಾ. ಸುಧಾಕರ್, ಹಿರಿಯರು, ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರು ಹಾಗೂ ಅವರ ಧರ್ಮಪತ್ನಿ ಅವರಿಗೆ ಕೊರೊನಾ ಸೋಂಕು ಧೃಢಪಟ್ಟಿರುವ ಸುದ್ದಿ ತಿಳಿಯಿತು. ವೈದ್ಯರೊಂದಿಗೆ ನಿಕಟ ಸಂಪರ್ಕದಲ್ಲಿದ್ದು ಅವರ ಆರೋಗ್ಯದ ಬಗ್ಗೆ ಖುದ್ದಾಗಿ ಮಾಹಿತಿ ಪಡೆಯಲಿದ್ದೇನೆ. ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಎಂದು ಹೇಳಿದ್ದಾರೆ. ದೇವೇಗೌಡ ದಂಪತಿಗೆ ಕೊರೋನಾ ಪಾಸಿಟಿವ್ ಬಂದ ವಿಚಾರ ಅವರ ಕುಟುಂಬವರ್ಗದವರನ್ನು ಆತಂಕಕ್ಕೆ ದೂಡಿದೆ. ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಮಣಿಪಾಲ್ ಆಸ್ಪತ್ರೆ ವೈದ್ಯರಿಗೆ ಕರೆ ಮಾಡಿ ತಮ್ಮ ತಂದೆಗೆ ನೀಡಲಾಗುವ ಶುಶ್ರೂಷೆ ಬಗ್ಗೆ ಚರ್ಚೆ ನಡೆಸಿದ್ದಾರೆನ್ನಲಾಗಿದೆ.

Edited By

venki swamy

Reported By

venki swamy

Comments