ಬೆಂಗಳೂರಿನಲ್ಲಿ ಕೊರೋನಾ ಟಫ್ ರೂಲ್ಸ್ ಬಗ್ಗೆ ಸುಳಿವು ಕೊಟ್ಟ ಸಚಿವ ಅಶೋಕ್
ಬೆಂಗಳೂರಿನಲ್ಲಿ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವುದು ಆತಂಕ ಮೂಡಿಸಿದೆ. ಈ ಕುರಿತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ಬಿಬಿಎಂಪಿ ಅಧಿಕಾರಿಗಳ ಜೊತೆ ಕಂದಾಯ ಸಚಿವ ಆರ್ ಅಶೋಕ್ ಕೋವಿಡ್ ನಿಯಂತ್ರಣ ಸಂಬಂಧ ಸಭೆ ನಡೆಸಿ, ಹಲವು ತೀರ್ಮಾನಗಳನ್ನು ಕೈಗೊಂಡರು.
ಆಗಸ್ಟ್ 15ರವರೆಗೆ ಬೆಂಗಳೂರಿನಲ್ಲಿ ಯಾವುದೇ ಕಠಿಣಕ್ರಮ ಇರುವುದಿಲ್ಲ, ಕರ್ಫ್ಯೂ ಇರುವುದಿಲ್ಲ. ಅದಾದ ಬಳಿಕ ಪರಿಸ್ಥಿತಿ ನೋಡಿಕೊಂಡು ಕ್ರಮ ಕೈಗೊಳ್ಳಲಾಗುವುದು. ನಂತರ ಕರ್ಫ್ಯೂ ಆಗಲೂಬಹುದು, ಆಗದೆಯೂ ಇರಬಹುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
Comments