ಮಧ್ಯಪ್ರದೇಶದಲ್ಲಿ ಇಬ್ಬರು ರೈತರು ಬಲಿ

06 Jun 2017 5:47 PM | Politics
745 Report

ಮಧ್ಯಪ್ರದೇಶ: ಮಧ್ಯಪ್ರದೇಶದ ಮಂಡ್ ಸೌರ್ ನಲ್ಲಿ ಪ್ರತಿಭಟನೆ ನಿರತ ರೈತರ ಮೇಲೆ ಪೊಲೀಸರು ಗುಂಡು ಹಾರಿಸಿದ್ದು, ಇಬ್ಬರು ರೈತರು ಬಲಿಯಾಗಿದ್ದಾರೆ. ಸಾಲಮನ್ನಾ ಕೃಷಿ ಉತ್ಪನ್ನಗಳಿಗೆ ನ್ಯಾಯ ಬೆಲೆ ನೀಡಬೇಕು ಎಂದು ಒತ್ತಾಯಿಸಿ ರೈತರ ಕಳೆದ ೬ ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದರು.

ಪ್ರತಿಭಟನೆ ವೇಳೆ ಪೊಲೀಸರು ಹಾಗೂ ರೈತರ ಮಧ್ಯೆ ಸಂಘರ್ಷ ಏರ್ಪಟ್ಟಿದೆ. ಪ್ರತಿಭಟನೆ ನಿರತರು ಕಲ್ಲು ತೂರಾಟ ನಡೆಸಿದ್ದಾರೆ. ಈ ಹಿನ್ನಲೆಯಲ್ಲಿ ಮಂಡ್ ಸೌರ್, ರಾಟ್ನಾಂ ಮತ್ತು ಉಜ್ಮೈನ್ ನಲ್ಲಿ ಅಂತರ್ಜಾಲ ಸಂಪರ್ಕ ಸ್ಥಗಿತಗೊಳಿಸಲಾಗಿತ್ತು. ರಾಷ್ಟ್ರೀಯ ಕಿಸಾನ್ ಮಜದೂರ್ ಸಂಘ್ ಇವತ್ತು ರಾಜ್ಯದ್ಯಂತ ಬಂದ್ ಗೆ ಕರೆ ನೀಡಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಅಕ್ಟೋಂಬರ್ ೩೧ರೊಳಗೆ ರೈತರ ಸಾಲ ಮನ್ನಾ ಮಾಡಲಾಗುವುದು, ಭಾರತದಲ್ಲಿ ಇದೇ ದೊಡ್ಡ ಮಟ್ಟದ ಸಾಲ ಮನ್ನಾ ಆಗಲಿದೆ ಎಂದು ಹೇಳಿದರು.

Edited By

venki swamy

Reported By

Sudha Ujja

Comments