ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧೆ?

30 Jun 2017 2:34 PM | Politics
569 Report

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

 ಸಿಎಂ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಚಾಮುಂಡೇಶ್ವರಿ ದೇವಸ್ಥಾನಕ್ಕೆ ತೆರಳಿ ಪೂಜೆಗೈದು ದೇವಿಯ ಆಶೀರ್ವಾದ ಪಡೆದರು. ತಂದೆ ಮುಂದಿನ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕಿಳಿಯುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.

 ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕ್ಷೇತ್ರ ಬದಲಾಯಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಈಗಾಗಲೇ ಸುಳಿವು ನೀಡಿದ್ದಾರೆ ಎನ್ನಲಾಗುತ್ತಿದೆ. 

 ಕಾಂಗ್ರೆಸ್ ಪಕ್ಷವನ್ನು ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ತರಬೇಕು ಎನ್ನುವುದು ನಮ್ಮ ಗುರಿಯಾಗಿದೆ. ಎಲ್ಲಾ ಕಾಂಗ್ರೆಸ್ ನಾಯಕರು ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ. 

Edited By

venki swamy

Reported By

Sudha Ujja

Comments