ಕಾಂಗ್ರೆಸ್ "ಇಂದಿರಾ ತಂತ್ರ'ಕ್ಕೆ ಬಿಜೆಪಿ "ಪಂಚ ತಂತ್ರ'

10 Aug 2017 11:08 AM | Politics
3928 Report

ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮಾಜಿ ಪ್ರಧಾನಿ ಇಂದಿರಾಗಾಂಧಿ ಹೆಸರಿನಲ್ಲಿ ಮುಂಬರುವ ವಿಧಾನಸಭೆ ಚುನಾವಣೆ ಎದುರಿಸಲು ಸಿದ್ಧತೆ ಆರಂಭಿಸುತ್ತಿದ್ದರೆ, ಇದಕ್ಕೆ ಪ್ರತಿಯಾಗಿ ಬಿಜೆಪಿ ಕೇಂದ್ರ ಮತ್ತು ರಾಜ್ಯದ ಐವರು ನಾಯಕರ ನೇತೃತ್ವದಲ್ಲಿ ಪಂಚತಂತ್ರ'ಗಳೊಂದಿಗೆ ಚುನಾವಣಾ ಕಾರ್ಯತಂತ್ರ ರೂಪಿಸಲು ಚಿಂತನೆ ನಡೆಸಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ರಾಜ್ಯ ಪ್ರವಾಸದ ಬಳಿಕ ಅವರು ಪ್ರಧಾನಿ ಮೋದಿ ಅವರೊಂದಿಗೆ ಸಮಾಲೋಚನೆ ನಡೆಸಿ ಈ ಕಾರ್ಯತಂತ್ರಕ್ಕೆ ಅಂತಿಮ ರೂಪ ನೀಡಲಿದ್ದಾರೆ. ಇದು ಕಾರ್ಯರೂಪಕ್ಕೆ ಬಂದರೆ ಅರುಣ್‌ ಜೇಟ್ಲಿ ಅವರಿಗೆ ಚುನಾವಣಾ ಉಸ್ತುವಾರಿ ಮತ್ತು ಡಿ.ವಿ.ಸದಾನಂದಗೌಡ ಅವರಿಗೆ ಪ್ರಚಾರ ಸಮಿತಿ ಸ್ಥಾನ ನೀಡುವ ಯೋಜನೆ ಸಿದ್ಧಪಡಿಸಲಾಗಿದೆ.

2008ರ ರಾಜ್ಯ ವಿಧಾನಸಭಾ ಚುನಾವಣೆ ಯಲ್ಲಿ ಅರುಣ್‌ ಜೇಟ್ಲಿ ಬಿಜೆಪಿಯ ಚುನಾವಣಾ ಉಸ್ತುವಾರಿಯಾಗಿದ್ದರು. ಆಗ ಯಡಿಯೂರಪ್ಪ ಸಿಎಂ ಅಭ್ಯರ್ಥಿಯಾಗಿದ್ದರೆ, ಸದಾನಂದಗೌಡ ರಾಜ್ಯಾಧ್ಯಕ್ಷರಾಗಿದ್ದರು.

ಆಗ ರಾಜ್ಯದಲ್ಲಿದ್ದ ಬಿಜೆಪಿ ಪರ ಅಲೆಯನ್ನು ಸಮರ್ಪಕವಾಗಿ ಬಳಸಿಕೊಂಡಿದ್ದ ಈ ಜೋಡಿ 110 ಸ್ಥಾನಗಳನ್ನು ಗೆದ್ದು ಬಿಜೆಪಿಯನ್ನು ಅಧಿಕಾರದ ಗದ್ದುಗೆಗೆ ಕೂರಿಸಿದ್ದರು. ಅದೇ ರೀತಿ 2018ರ ವಿಧಾನಸಭೆ ಚುನಾಣೆಯಲ್ಲೂ ರಾಜ್ಯದಲ್ಲಿ ಬಿಜೆಪಿಗೆ ಅನುಕೂಲಕರ ವಾತಾವರಣ ಇದೆ. ಜೊತೆಗೆ ಕೇಂದ್ರದಲ್ಲಿನ ಮೋದಿ ಸರ್ಕಾರದ ಜನಪ್ರಿಯತೆಯ ಲಾಭವೂ ಸಿಗಲಿದೆ. ಈ ಎರಡೂ ಅನುಕೂಲಗಳನ್ನು ಬಳಸಿಕೊಳ್ಳುವ ಉದ್ದೇಶದಿಂದ ಮೋದಿ ಮತ್ತು ಅಮಿತ್‌ ಶಾ ನೇತೃತ್ವದಲ್ಲಿ ಜೇಟ್ಲಿ ಯಡಿಯೂರಪ್ಪ ಮತ್ತು ಸದಾನಂದಗೌಡ ಅವರನ್ನು ಸೇರಿಸಿಕೊಂಡು ಚುನಾವಣಾ ಕಾರ್ಯತಂತ್ರ ರೂಪಿಸುವ ಬಗ್ಗೆ ರಾಜ್ಯ ಬಿಜೆಪಿಯಲ್ಲಿ ಈಗಾಗಲೇ ಸಿದಟಛಿತೆ ನಡೆಯುತ್ತಿದ್ದು, ಪ್ರಧಾನಿ ಮತ್ತು ಅಮಿತ್‌ ಶಾ ಅವರ ಒಪ್ಪಿಗೆಗಾಗಿ ಕಾಯಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

 

Courtesy: udayavani

Comments