ಬಿಎಂಟಿಸಿ ಬಸ್ ನಲ್ಲಿನ ಕೆಟ್ಟ ಅನುಭವದೊಂದಿಗೆ ಸಿಎಂ ಸಿದ್ಧರಾಮಯ್ಯ

14 Sep 2017 1:08 PM | Politics
347 Report

ಇಂದು ಬೆಳಗ್ಗೆ ಸಿಎಂ ಬೆಂಗಳೂರಿನ ಮಳೆಯಲ್ಲಿ ಸಂಕಷ್ಟಕ್ಕಿಡಾದ ಪ್ರದೇಶಗಳಿಗೆ ಭೇಟಿ ನೀಡಿದರು. ನಂತರ ಬಿಎಂಟಿಸಿ ಬಸ್ಸಿನಲ್ಲಿ ಸಿಎಂ ಮತ್ತು ಪಕ್ಷದ ಕಾರ್ಯಕರ್ತರು ಹಾಗೂ ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್, ನಗರಾಭಿವೃದ್ಧಿ ಸಚಿವ ಆರ್.ರೋಶನ್ ಬೇಗ್, ಗೃಹ ಸಚಿವ ರಾಮಲಿಂಗಾ ರೆಡ್ಡಿ, ಸಾರಿಗೆ ಸಚಿವ ಹೆಚ್.ಎಂ.ರೇವಣ್ಣ, ಮೇಯರ್ ಜಿ. ಪದ್ಮಾವತಿ ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಮತ್ತು ಬಿಡಬ್ಲ್ಯುಎಸ್‌ಎಸ್ ಬಿ ಅಧ್ಯಕ್ಷ ತುಶಾರ್ ಗಿರಿನಾಥ್ ಪ್ರಯಾಣಿಸಿದರು.

ಗೃಹ ಕಚೇರಿ ಕೃಷ್ಣಾದಿಂದ ಮುಖ್ಯಮಂತ್ರಿಗಳು ಕುಳಿತ ಬಸ್ಸು ಹೊರಟ ತಕ್ಷಣ ಬಸ್ಸಿನ ಹವಾನಿಯಂತ್ರಿತ ಸೌಲಭ್ಯದ ತೊಂದರೆಯಿಂದ ಬಸ್ಸಿನ ಒಳಗಿನ ಬಿಸಿಗೆ ಮುಖ್ಯಮಂತ್ರಿ, ಸಚಿವರು ಮತ್ತು ಅಧಿಕಾರಿಗಳು ಬೆವತು ಹೋದರು. ಬಸ್ಸಿನಲ್ಲಿ ಕುಳಿತಿದ್ದ ಮುಖ್ಯಮಂತ್ರಿ ಹಾಗೂ ಇತರ ಸಚಿವರು ಶಾಂತಿನಗರ ಬಸ್ ಡಿಪೊಗೆ ಬರುವವರೆಗೆ ಸೆಕೆ ಮತ್ತು ಬೆಂಗಳೂರಿನ ಟ್ರಾಫಿಕ್ ನ ಕಿರಿಕಿರಿ ಅನುಭವಿಸಬೇಕಾಯಿತು. ಅಲ್ಲಿಂದ ನಂತರ ಇನ್ನೊಂದು ಬಸ್ಸಿನಲ್ಲಿ ತೆರಳಿದರು. ಆ ಬಸ್ಸು ಕೂಡ ಅಲ್ಲಿಂದ ಹೊರಟಾಗ ಸರಿಯಾಗಿತ್ತು. ಹೊಸೂರು ರಸ್ತೆ ತಲುಪುವ ಹೊತ್ತಿಗೆ ಸಿಲ್ಕ್ ಬೋರ್ಡ್ ಜಂಕ್ಷನ್ ನಲ್ಲಿ ಸಂಚಾರ ದಟ್ಟಣೆ ತೀವ್ರವಾಗಿತ್ತು. ರಾಮಮೂರ್ತಿ ನಗರ ತಲುಪುವ ಹೊತ್ತಿಗೆ ಮತ್ತೆ ಬಸ್ಸು ಕೆಟ್ಟು ಹೋಗಿ ನಿಂತಿತು. ಅಲ್ಲಿ ಸುಮಾರು 20 ನಿಮಿಷ ಕಾದರು. ಆದರೆ ದುರಸ್ತಿಯಾಗದ ಹಿನ್ನೆಲೆಯಲ್ಲಿ ಅಲ್ಲಿ ತಡವಾಗಿದ್ದರಿಂದ ಕಲ್ಕೆರೆಗೆ ಹೋಗದೆ ತಮ್ಮ ತಮ್ಮ ಕಾರುಗಳಲ್ಲಿ ಮುಖ್ಯಮಂತ್ರಿ ಮತ್ತು ಸಚಿವರು ತೆರಳಿದರು.

Courtesy: Dailyhunt

Comments