ಪರಿಷತ್ ಸದಸ್ಯರನ್ನು ಮತದಾರರ ಪಟ್ಟಿಗೆ ಸೇರಿಸಿದವರಿಗೆ ಸಂಕಷ್ಟ

15 Sep 2017 5:10 PM | Politics
384 Report

ಬೆಂಗಳೂರು : ಬಿಬಿಎಂಪಿ ಮೇಯರ್ ಚುನಾವಣೆ ಮತದಾರರ ಪಟ್ಟಿಗೆ 8 ವಿಧಾನಪರಿಷತ್ ಸದಸ್ಯರನ್ನು ಸೇರಿಸಿ ಲೋಪವೆಸಗಿದ್ದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಆದರೆ, ವಿಧಾನಪರಿಷತ್ ಸದಸ್ಯರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದು ಇನ್ನೂ ತಿಳಿದುಬಂದಿಲ್ಲ.

ಕೇಂದ್ರ ಚುನಾವಣಾ ಆಯೋಗ ಬಿಬಿಎಂಪಿ ಆಯುಕ್ತರಿಗೆ ಈ ಕುರಿತು ಸೂಚನೆ ನೀಡಿದೆ. ವಿಧಾನಪರಿಷತ್ ಸದಸ್ಯರ ವಿಳಾಸವನ್ನು ಪರಿಶೀಲನೆ ನಡೆಸದೇ ಅವರ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಿ ಲೋಪವೆಸಗಲಾಗಿದೆ. ಈ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಲಾಗಿದೆ.

ಆರ್.ಬಿ.ತಿಮ್ಮಾಪುರ, ಅಲ್ಲಂ ವೀರಭದ್ರಪ್ಪ, ರಾಘು ಆಚಾರ್, ಎನ್‌.ಎಸ್.ಬೋಸರಾಜು, ಎಸ್‌.ರವಿ, ಸಿ.ಆರ್.ಮನೋಹರ್ (ಜೆಡಿಎಸ್), ಅಪ್ಪಾಜಿ ಗೌಡ (ಜೆಡಿಎಸ್), ಎಂ.ಡಿ.ಲಕ್ಷ್ಮೀ ನಾರಾಯಣ (ಪಕ್ಷೇತರ) ಬೆಂಗಳೂರು ಮತದಾರರ ಪಟ್ಟಿಗೆ ಸೇರ್ಪಡೆ ಗೊಂಡಿದ್ದರು.

ಎಚ್.ಡಿ.ಕುಮಾರಸ್ವಾಮಿ ಹೇಳುವುದೇನು? 

ಆದರೆ, ಈ ಸದಸ್ಯರು ತಮ್ಮ ಸ್ವ ಕ್ಷೇತ್ರದ ವಿಳಾಸ ನೀಡಿ ವಿಧಾನಪರಿಷತ್ ಭತ್ಯೆಯನ್ನು ಪಡೆಯುತ್ತಿದ್ದರು. ಬಿಬಿಎಂಪಿ ವಿರೋಧ ಪಕ್ಷದ ನಾಯಕ ಪದ್ಮನಾಭ ರೆಡ್ಡಿ ಈ ಕುರಿತು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಈ ಬಗ್ಗೆ ವರದಿ ನೀಡುವಂತೆ ಆಯೋಗ ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿತ್ತು.

Courtesy: oneindia kannada

Comments