ಮುಂದಿನ ಚುನಾವಣೆಯ ನೇತೃತ್ವವಹಿಸಲಿರುವ ಸಿಎಂ ಸಿದ್ದರಾಮಯ್ಯ

10 Oct 2017 5:52 PM | Politics
448 Report

ಮುದ್ದೇಬಿಹಾಳ ಶಾಸಕ ದೆಹಲಿ ವಿಶೇಷ ಪ್ರತಿನಿಧಿ ಸಿ.ಎಸ್.ಅಪ್ಪಾಜಿ ನಾಡಗೌಡ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಮುದ್ದೇಬಿಹಾಳಕ್ಕೆ ಆಗಮಿಸಿ ಶುಭ ಕೋರಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2018ರ ವಿಧಾನಸಭೆ ಚುನಾವಣೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಎದುರಿಸಲಾಗುವುದು.

ಮುಂದಿನ ಚುನಾವಣೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆಯಲಿದೆ. ಈ ಸಂಬಂಧ ಹೈಕಮಾಂಡ್ ನಿರ್ದೇಶನ ನೀಡಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್. ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ, ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಈ ಬಗ್ಗೆ ನಿರ್ದೇಶನ ನೀಡಿದ್ದಾರೆ ಎಂದು ಹೇಳಿದರು. ರಾಜ್ಯದಲ್ಲಿ 54 ಸಾವಿರ ಬೂತ್‍ಗಳಿಗೆ ಕ್ರಿಯಾಶೀಲ ಕಾಂಗ್ರೆಸ್ ಕಾರ್ಯಕರ್ತರನ್ನು ನೇಮಿಸುತ್ತಿದ್ದು, ಆಯಾ ಬೂತ್‍ನಲ್ಲಿ ಪ್ರಭಾವಿಯಾಗಿರುವ ಕಾರ್ಯಕರ್ತರಿಗೆ ನಾಯಕತ್ವ ನೀಡಿ ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದರು.

ಗೆಲ್ಲುವ ಸಾಮಥ್ರ್ಯವಿರುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುವುದು ಎಂದು ತಿಳಿಸಿದರು. ಮಾತೃಪೂರ್ಣ ಯೋಜನೆ ಕುರಿತು ಶಾಸಕ ಸಾ.ರಾ.ಮಹೇಶ್ ಅವರು ಅದೊಂದು ಕಿಕ್‍ಬ್ಯಾಕ್ ಯೋಜನೆ ಎಂದು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಈ ಯೋಜನೆ ಏನೆಂಬುದು ಅರ್ಥೈಸಿಕೊಳ್ಳಲಿ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಎಸ್.ಜಿ.ಪಾಟೀಲ್, ಶೃಂಗಾರಗೌಡ, ಅಹಲ್ಯೆ ಬಾಯಿ ಹೋಳ್ಕರ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಂ.ಎನ್.ಮದಕರಿ, ಎಪಿಎಂಸಿ ಅಧ್ಯಕ್ಷ ಗುರುತಾರನಾಳ, ಬೀರಲಿಂಗೇಶ್ವರ ಐಟಿಐ ಕಾಲೇಜಿನ ಪ್ರಾಚಾರ್ಯ ಎಚ್.ಟಿ.ಕುರಿ, ಆಪ್ತ ಸಹಾಯಕ ರಾಜುನಡುಮನಿ ಉಪಸ್ಥಿತರಿದ್ದರು.

Edited By

Shruthi G

Reported By

Madhu shree

Comments