ಪುಟ್ಟಣ್ಣ ಚಿತ್ತ ಎತ್ತ? ಕಾಂಗ್ರೆಸ್ ಪಕ್ಷವೂ?, ಬಿಜೆಪಿಯೋ

12 Oct 2017 4:56 PM | Politics
377 Report

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಮೂರು ಬಾರಿ ಪುಟ್ಟಣ್ಣ ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಪಕ್ಷದ ಚಟುವಟಿಕೆಗಳಿಂದ ಬಹುತೇಕ ದೂರ ಉಳಿದಿರುವ ಪುಟ್ಟಣ್ಣ, ಪಕ್ಷ ತೊರೆಯುವುದು ಖಚಿತವಾಗಿದೆ. 2020ರ ವರೆಗೆ ಅವರ ಪರಿಷತ್ ಸದಸ್ಯತ್ವದ ಅವಧಿ ಇದೆ. ಅದಕ್ಕೂ ಮೊದಲೇ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದಾರೆ.

ವಿಧಾನಪರಿಷತ್ ಸದಸ್ಯ, ಜೆಡಿಎಸ್ ನಾಯಕ ಪುಟ್ಟಣ್ಣ ಅವರು ಪಕ್ಷ ತೊರೆಯಲು ನಿರ್ಧರಿಸಿದ್ದಾರೆ. ಒಂದು ವೇಳೆ ಪುಟ್ಟಣ್ಣ ಬಿಜೆಪಿ ಸೇರಿದರೆ, ಬೆಂಗಳೂರಿನ ಯಶವಂತಪುರ ಕ್ಷೇತ್ರದಿಂದ ಅವರಿಗೆ ಟಿಕೆಟ್ ನೀಡಲಾಗುತ್ತದೆ ಎಂಬ ಸುದ್ದಿಗಳು ಹಬ್ಬಿವೆ. ಜೆಡಿಎಸ್ ಪಕ್ಷ ತೊರೆದರೆ ಪುಟ್ಟಣ್ಣ ಅವರು 2018ರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ. ಪುಟ್ಟಣ್ಣ ಅವರು ಬಿಜೆಪಿ ಸೇರಿದರೆ ಯಶವಂತಪುರ ಕ್ಷೇತ್ರದಿಂದ ಅವರನ್ನು ಪಕ್ಷ ಕಣಕ್ಕಿಳಿಸುವ ಸಾಧ್ಯತೆ ಇದೆ. ಆ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಾದ ಎಸ್.ಟಿ.ಸೋಮಶೇಖರ್ ಸೋಲಿಸಲು ಬಿಜೆಪಿ ತಂತ್ರ ರೂಪಿಸಿದೆ. 2013ರ ಚುನಾವಣೆಯಲ್ಲಿಯೇ ಯಶವಂತಪುರ ಕ್ಷೇತ್ರ ಕುತೂಹಲದ ಕಣವಾಗಿತ್ತು. ಕಾಂಗ್ರೆಸ್ ನ ಎಸ್.ಟಿ.ಸೋಮಶೇಖರ್ 120,380 ಮತಗಳನ್ನು ಪಡೆದು ಜಯಗಳಿಸಿದ್ದರು. ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿದ್ದ ಟಿ.ಎನ್.ಜವರಾಯಿ ಗೌಡ ಅವರು 91,280 ಮತಗಳನ್ನು ಪಡೆದಿದ್ದರು. ಬಿಜೆಪಿ ಮೂರನೇ ಸ್ಥಾನಕ್ಕೆ ಕುಸಿದಿತ್ತು...
ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಯಾವ ಪಕ್ಷಕ್ಕೆ ಸೇರುತ್ತಾರೆ? ಎಂಬುದು ಇನ್ನೂ ಖಚಿತವಾಗಿಲ್ಲ. 'ಕಾಂಗ್ರೆಸ್, ಬಿಜೆಪಿ ಎರಡೂ ಪಕ್ಷಗಳಿಂದ ಆಹ್ವಾನ ಬಂದಿದೆ. ಯಾವ ಪಕ್ಷ ಸೇರಬೇಕು ಎಂಬ ಬಗ್ಗೆ ಇನ್ನೂ ತೀರ್ಮಾನ ಕೈಗೊಂಡಿಲ್ಲ' ಎಂದು ಪುಟ್ಟಣ್ಣ ಹೇಳಿದ್ದಾರೆ.

Edited By

Hema Latha

Reported By

Madhu shree

Comments