ಬಹುಮತ ಸಿಗದಿದ್ದರೆ ವಿಪಕ್ಷದಲ್ಲಿರುತ್ತೇವೆ, ಸಮ್ಮಿಶ್ರ ಸರ್ಕಾರ ಮಾಡುವುದಿಲ್ಲ- ಎಚ್,ಡಿ ದೇವೇಗೌಡ

13 Oct 2017 11:02 PM | Politics
391 Report

ಸಮ್ಮಿಶ್ರ ಸರ್ಕಾರ ನಡೆಸಿ ಈಗಾಗಲೇ ಸಾಕಷ್ಟು ನೊಂದಿದ್ದೇವೆ. ಮುಂದಿನ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಬಹುಮತ ಸಿಗದೇ ಇದ್ದರೆ ವಿಪಕ್ಷದಲ್ಲಿ ಕುರುತ್ತೇವೆಯೇ ಹೊರೆತು ಯಾರೊಂದಿಗೂ ಸೇರಿ ಸಮ್ಮಿಶ್ರ ಸರ್ಕಾರ ಮಾಡುವುದಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಘಟಕದ ಅಧ್ಯಕ್ಷ ಎಚ್.ಡಿ ದೇವೇಗೌಡ ಹೇಳಿದ್ದಾರೆ.

ಬೆಂಗಳೂರು: ಮುಂದಿನ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಬಹುಮತ ಸಿಗದೇ ಇದ್ದರೆ ವಿಪಕ್ಷದಲ್ಲಿ ಕುರುತ್ತೇವೆಯೇ ಹೊರೆತು ಯಾರೊಂದಿಗೂ ಸೇರಿ ಸಮ್ಮಿಶ್ರ ಸರ್ಕಾರ ಮಾಡುವುದಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಘಟಕದ ಅಧ್ಯಕ್ಷ ಎಚ್.ಡಿ ದೇವೇಗೌಡ ಹೇಳಿದ್ದಾರೆ.

ಸಮ್ಮಿಶ್ರ ಸರ್ಕಾರ ನಡೆಸಿ ಈಗಾಗಲೇ ಸಾಕಷ್ಟು ನೊಂದಿರುವುದಾಗಿ ಹೇಳಿದರು. ನಾನು ಶ್ರೀನಿವಾಸ್ ಪ್ರಸಾದ್ ಅವರನ್ನು ಜೆಡಿಎಸ್ ಗೆ ಕರೆತಂದಾಗ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದರು. ಈಗ ಸಿದ್ದರಾಮಯ್ಯ ವಿರುದ್ಧ ನನ್ನ ಹೋರಾಟ ಎಂದು ಪ್ರಸಾದ್ ಹೇಳುತ್ತಿದ್ದಾರೆ. ಅವರಿಗೆ ನಂಜುನಗೂಡು ಉಪ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧೆ ಮಾಡಲು ಸಲಹೆ ನೀಡಿದ್ದೆ ಎಂದು ದೇವೇಗೌಡ ತಿಳಿಸಿದ್ದಾರೆ. ಸಿ.ಪಿ ಯೋಗೇಶ್ವರ್ ಜೆಡಿಎಸ್ ಸೇರಲಿದ್ದಾರೆ ಎನ್ನುವ ವಿಚಾರದ ಬಗ್ಗೆ ಮಾತನಾಡಿದ ಅವರು ಯೋಗೇಶ್ವರ್ ನಮ್ಮ ಪಕ್ಷ ಸೇರಲಿರುವ ಬಗ್ಗೆ ನನಗೆ ಗೊತ್ತಿಲ್ಲ ಈ ಕುರಿತು ನಾನು ಮಾತನಾಡಿಲ್ಲ ಎಂದಿದ್ದಾರೆ.

ಹಿಮಾಚಲ ಪ್ರದೇಶ ಗುಜುರಾತ್ ಚುನಾವಣೆ ಒಟ್ಟಿಗೆ ನಡೆಯುತ್ತವೆ ಎಂದು ಭಾವಿಸಿದ್ದೇವು. ಆದರೆ ಈ ವಿಷಯದಲ್ಲಿ ಪ್ರಧಾನಿ ಪ್ರಯೋಗ ಮಾಡಲು ಹೊರಟ್ಟಿದ್ದಾರೆ. ನಾಮಪತ್ರ ಸಲ್ಲಿಕೆ ಹಾಗೂ ಮತದಾನ ನಡುವೆ ಕೇವಲ 9 ದಿನಗಳ ಕಾಲಾವಕಾಶ ನೀಡಲಾಗಿದೆ. ಇದು ನಮ್ಮಂತಹ ಪ್ರಾದೇಶಿಕ ಪಕ್ಷಗಳಿಗೆ ಎಚ್ಚರಿಕೆ ಗಂಟೆಯಾಗಲಿದೆ ಎಂದರು.

 

Edited By

venki swamy

Reported By

Sudha Ujja

Comments