ಸಿಎಂ ಹೇಳಿಕೆಯ ಬೆನ್ನಲ್ಲೇ ಮುಚ್ಚಿದ 8 ಕನ್ನಡ ಶಾಲೆಗಳು

03 Nov 2017 11:48 AM | Politics
257 Report

ಸರ್ಕಾರಿ ಶಾಲೆಗಳಲ್ಲಿ ಒಬ್ಬ ವಿದ್ಯಾರ್ಥಿ ಇದ್ದರೂ ತರಗತಿ ನಡೆಸುವಂತೆ ಶಿಕ್ಷಣ ಇಲಾಖೆಗೆ ಸೂಚಿಸಿರುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು. 1983 ರ ಕರ್ನಾಟಕ ಶಿಕ್ಷಣ ಕಾಯ್ದೆ ನಿಯಮದ ಅನ್ವಯ, ನೋಟಿಸ್ ನೀಡಲಾಗಿದೆ ಎಂದು ಹೇಳಲಾಗಿದೆ.

ಒಬ್ಬ ವಿದ್ಯಾರ್ಥಿಯಿದ್ದರೂ ಕೂಡ ಕನ್ನಡ ಶಾಲೆಯನ್ನು ಮುಚ್ಚುವುದಿಲ್ಲ ಎಂದು ರಾಜ್ಯೋತ್ಸವದ ದಿನ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇದರ ಬೆನ್ನಲ್ಲೇ, ಬೆಂಗಳೂರು ದಕ್ಷಿಣ ವಲಯದ 8 ಕನ್ನಡ ಶಾಲೆಗಳನ್ನು ಮುಚ್ಚುವಂತೆ ಆದೇಶ ಹೊರಡಿಸಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಅನುದಾನಿತ 8 ಕನ್ನಡ ಶಾಲೆಗಳನ್ನು ಮುಚ್ಚುವಂತೆ ಸುತ್ತೋಲೆ ಹೊರಡಿಸಿದೆ. ಈ ಶಾಲೆಗಳಲ್ಲಿ 25 ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿರುವ ಕಾರಣ ಶಾಲೆ ಮುಚ್ಚುವಂತೆ ಸುತ್ತೋಲೆ ಹೊರಡಿಸಲಾಗಿದೆ. ಶಾಲೆಯೊಂದರಲ್ಲಿ ಕನಿಷ್ಠ 25 ವಿದ್ಯಾರ್ಥಿಗಳಿರುವುದು ಕಡ್ಡಾಯವಾಗಿದೆ, ಆದರೆ ಕಳೆದ ಮೂರು ವರ್ಷಗಳಿಂದ ಈ ಶಾಲೆಗಳಲ್ಲಿ ಅಷ್ಟು ಪ್ರಮಾಣದ ವಿದ್ಯಾರ್ಥಿಗಳಿಲ್ಲ,ಹೀಗಾಗಿ ಶಾಲೆಗಳನ್ನು ಮುಚ್ಚಲು ಆದೇಶಿಸಲಾಗಿದೆ ಎಂದು ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Edited By

Hema Latha

Reported By

Madhu shree

Comments