ಜೆಡಿಎಸ್ ನ ಈ ಆರು ಶಾಸಕರನ್ನು ಸೆಳೆಯುವ ಪ್ರಯತ್ನದಲ್ಲಿ ಬಿಜೆಪಿ

09 Nov 2017 11:54 AM | Politics
448 Report

ಜೆಡಿಎಸ್‌ ಸದಸ್ಯರನ್ನು ಬಿಜೆಪಿಗೆ ಸೆಳೆಯುವ ಪ್ರಯತ್ನ ನಡೆಸುತ್ತಿದ್ದು ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಬಿಜೆಪಿ ಶಕ್ತಿ ಕಡಿಮೆ ಇರುವ ಕ್ಷೇತ್ರಗಳಲ್ಲಿ ಸ್ವಂತ ವರ್ಚಸ್ಸು ಇರುವ ನಾಯಕರನ್ನು ಕರೆ ತಂದು ಬಿಜೆಪಿ ಟಿಕೆಟ್‌ ಕೊಟ್ಟು ಗೆಲ್ಲಿಸಿ ಸಂಖ್ಯಾಶಕ್ತಿ ವೃದ್ಧಿಸಿಕೊಳ್ಳಲು ಈ ತಂತ್ರ ರೂಪಿಸಲಾಗಿದೆ ಎಂದು ತಿಳಿದು ಬಂದಿದೆ.

ಜೆಡಿಎಸ್‌ನ ಏಳು ಬಂಡಾಯ ಶಾಸಕರು ಕಾಂಗ್ರೆಸ್‌ ಹೊಸ್ತಿಲಲ್ಲಿರುವ ಬೆನ್ನಲ್ಲೇ ಇನ್ನೂ ಆರು ಶಾಸಕರನ್ನು ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ರಾಯಚೂರಿನ ಶಿವರಾಜ್‌ ಪಾಟೀಲ್‌, ಲಿಂಗಸಗೂರಿನ ಮಾನಪ್ಪ ವಜ್ಜಲ್‌, ಅರಸೀಕೆರೆಯ ಶಿವಲಿಂಗೇಗೌಡ, ನೆಲಮಂಗಲದ ಡಾ.ಶ್ರೀನಿವಾಸಮೂರ್ತಿ, ದೇವನಹಳ್ಳಿಯ ಪಿಳ್ಳಮುನಿಶಾಮಪ್ಪ, ಭದ್ರಾವತಿಯ ಅಪ್ಪಾಜಿ ಅವರನ್ನು ಸೆಳೆಯಲು ಮಾತುಕತೆ ನಡೆಸಲಾಗುತ್ತಿದೆ. ಮಾಜಿ ಉಪ ಮುಖ್ಯಮಂತ್ರಿ ಆರ್‌.ಅಶೋಕ್‌ ಹಾಗೂ ಇತ್ತೀಚೆಗಷ್ಟೇ ಬಿಜೆಪಿ ಸೇರಿದ ಸಿ.ಪಿ.ಯೋಗೇಶ್ವರ್‌ ಅವರು ಜೆಡಿಎಸ್‌ ಸದಸ್ಯರನ್ನು ಬಿಜೆಪಿಗೆ ಸೆಳೆಯುವ ಪ್ರಯತ್ನ ನಡೆಸುತ್ತಿದ್ದು ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಆದರೆ, ಜೆಡಿಎಸ್‌ ಮೂಲಗಳ ಪ್ರಕಾರ ಇವೆಲ್ಲವೂ ವದಂತಿ. ಯಾರೂ ಬಿಜೆಪಿ ಸೇರುವುದಿಲ್ಲ. ಪಕ್ಷದ ವರ್ಚಸ್ಸು ಕುಗ್ಗಿಸಲು ನಡೆಸುತ್ತಿರುವ ಪಿತೂರಿ ಎಂದು ಜೆಡಿಎಸ್‌ ಮೂಲಗಳು ತಿಳಿಸಿವೆ. 

Edited By

Hema Latha

Reported By

Madhu shree

Comments