ಜೆಡಿಎಸ್ ಪಕ್ಷವನ್ನು ಲಘುವಾಗಿ ಪರಿಗಣಿಸಬೇಡಿ ಸಿಎಂ ವಿರುದ್ಧ ಎಚ್ ಡಿಕೆ ವಾಗ್ದಾಳಿ

10 Nov 2017 10:16 AM | Politics
446 Report

ಜೆಡಿಎಸ್ ಪಕ್ಷವನ್ನು ಲಘುವಾಗಿ ಪರಿಗಣಿಸಬೇಡಿ, 113 ಸ್ಥಾನಗಳು ನಮ್ಮ ಗುರಿ, ಈ ಬಾರಿ ಗುರಿ ತಲುಪಲಿದ್ದು, ಯಾರ ಹಂಗಿಗೂ ಒಳಗಾಗದೆ ಸ್ವಂತ ಬಲದ ಮೇಲೆ ಸರ್ಕಾರ ರಚನೆ ಮಾಡುತ್ತೇವೆ. ಈ ಬಾರಿ ಕಿಂಗ್​ವೆುೕಕರ್ ಅಲ್ಲ, ಕಿಂಗ್ ಆಗುವುದು ನಮ್ಮ ಗುರಿ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಶಿವಮೊಗ್ಗದಲ್ಲಿರುವ ಜೆಡಿಎಸ್ ಕರ್ನಾಟಕ ವಿಕಾಸ ಯಾತ್ರೆಯ ಭಾಗವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ಬರಲಿರುವ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾದರೆ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅವರಿಗೆ ಬೆಂಬಲ ನೀಡಬೇಡಿ ಎಂದು ಕಾಂಗ್ರೆಸ್ ಮುಖಂಡರೇ ತಮಗೆ ಮನವಿ ಮಾಡುತ್ತಿದ್ದಾರೆ ಎಂದಿದ್ದಾರೆ. ದೇವೇಗೌಡರಿಗೆ ಕಾಂಗ್ರೆಸ್ ಪರ ಒಲವು ಇದೆ. ಅತಂತ್ರ ಸ್ಥಿತಿ ನಿರ್ಮಾಣವಾದರೆ ನಮ್ಮನ್ನೇ ಬೆಂಬಲಿಸಿ ಎಂದು ಬಿಜೆಪಿ ಮುಖಂಡರೂ ಹೇಳುತ್ತಿದ್ದಾರೆ. ವಿಕಾಸ ಯಾತ್ರೆ ಬಗ್ಗೆ ವ್ಯಂಗ್ಯವಾಡಿದ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕಿಡಿಕಾರಿದ್ದಾರೆ. ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ಮಾತನಾಡಿದ ಗೌಡರು, ನಾನು ಒಂದೂವರೆ ವರ್ಷ ಮುಖ್ಯಮಂತ್ರಿಯಾಗಿ ರಾಜ್ಯಕ್ಕೆ ಏನು ಮಾಡಿದ್ದೇನೆ ಎಂಬುದನ್ನು ನೆನಪಿಸಿಕೊಳ್ಳಬೇಕು. ಬೆಂಗಳೂರಿನ ಐಟಿ-ಬಿಟಿ ಕ್ಷೇತ್ರದ ಅಭಿವೃದ್ಧಿಗೆ ಬುನಾದಿ ಹಾಕಿದ್ದು ನಾನು ಎನ್ನುವುದು ಗೊತ್ತಿದ್ದರೂ ವ್ಯಂಗ್ಯವಾಗಿ ಮಾತನಾಡಲು ನಾಚಿಕೆಯಾಗುವುದಿಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದರು.

Edited By

Hema Latha

Reported By

Madhu shree

Comments