ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂದು ಸಂಜಯ್ ಪಾಟೀಲ್ ವಿರುದ್ಧ ಪ್ರಕರಣ ದಾಖಲು

10 Nov 2017 12:08 PM | Politics
553 Report

ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಎದುರು ನಡೆದಿದ್ದ ಟಿಪ್ಪು ಜಯಂತಿ ಆಚರಣೆ ವಿರೋಧಿ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಪಾಟೀಲ್ ಅವರು ಕೋಮು ಭಾವನೆಗೆ ದಕ್ಕೆ ತರುವಂತ ಮಾತುಗಳನ್ನು ಆಡಿದ್ದರು ಎಂದು ಹೇಳಲಾಗಿತ್ತು.

ಸಾರ್ವಜನಿಕ ಭಾಷಣೆ ಮಾಡಿದ್ದ ಸಂಜಯ್ ಪಾಟೀಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದರು. ಈ ವೇಳೆ ಕೋಮು ಸಾಮರಸ್ಯ ಕದಡುವ ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂಬ ಆರೋಪಗಳು ಕೇಳಿ ಬಂದಿದ್ದವು. ಈ ಹಿನ್ನಲೆಯಲ್ಲಿ ಪೊಲೀಸರು ಪಾಟೀಲ್ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ವರದಿಗಳು ತಿಳಿಸಿವೆ. 

 ಭಾಷಣ ಮಾಡುವ ಭರಾಟೆಯಲ್ಲಿದ್ದ ಪಾಟೀಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನ್ಮಸ್ಥಳ ಮೈಸೂರೋ ಅಥವಾ ಲಾಹೋರೋ ಎಂದು ಪ್ರಶ್ನೆ ಮಾಡಿದ್ದರು. ಅಲ್ಲದೆ, ಭಾಷಣದುದ್ದಕ್ಕೂ ರಾಜ್ಯ ಸರ್ಕಾರ ಮತ್ತು ಸಿದ್ದರಾಮಯ್ಯ ವಿರುದ್ಧ ಉಗ್ರವಾಗಿ ವಾಗ್ದಾಳಿ ನಡೆಸಿದ್ದರು. ಈ ಹಿನ್ನಲೆಯಲ್ಲಿ ಪಾಟೀಲ್ ವಿರುದ್ಧ ಐಪಿಸಿ ಸೆಕ್ಷನ್ 153 (ಎ), 143, 149, 188, 283 and 289 ಅನ್ವಯ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

Edited By

Hema Latha

Reported By

Madhu shree

Comments