ಬೇಲೂರು ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆಗೆ ಗ್ರೀನ್ ಸಿಗ್ನಲ್ ಸಿಕ್ಕಿದ್ಯಾ?

29 Nov 2017 2:28 PM | Politics
400 Report

ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ರಾಜಕೀಯ ಪ್ರವೇಶ ನಿಶ್ಚಿತ ಎಂಬ ಮಾತುಗಳು ಕೇಳಿಬರುತ್ತಿವೆ.ವಿಧಾನಸಭಾ ಚುನಾವಣೆಗೆ ಪ್ರಜ್ವಲ್ ರೇವಣ್ಣ ಸ್ಪರ್ಧೆ ಬಹುತೇಕ ಖಚಿತ. ಬೇಲೂರು ವಿಧಾನಸಭಾ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.

ಕಾಂಗ್ರೆಸ್ಸಿನ ಹಾಲಿ ಶಾಸಕ ರುದ್ರೇಶ್ ಗೌಡ ಸ್ಪರ್ಧೆ ಅನುಮಾನ. ಹೀಗಾಗಿ ಜೆಡಿಎಸ್ ಗೆಲುವಿನ ಸಾಧ್ಯತೆ ಹೆಚ್ಚಿರುವುದರಿಂದ ಪ್ರಜ್ವಲ್ ಸ್ಪರ್ಧೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದು ಜೆಡಿಎಸ್ ಉನ್ನತ ಮೂಲಗಳು ಮಾಹಿತಿ ನೀಡಿವೆ.

Edited By

Shruthi G

Reported By

Shruthi G

Comments