ಸಂಕ್ರಾಂತಿ ವೇಳೆಗೆ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲು ಸಿದ್ಧತೆ

16 Dec 2017 3:35 PM | Politics
1405 Report

ಮುಂದಿನ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಸಂಕ್ರಾಂತಿಗೆ ಬಿಡುಗಡೆ ಮಾಡಲು ಜೆಡಿಎಸ್‌ ಕೋರ್‌ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ ಹಾಗೂ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಸಮ್ಮುಖದಲ್ಲಿ ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ, ಗುಜರಾತ್‌ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಫ‌ಲಿತಾಂಶದ ನಂತರದ ವಿದ್ಯಮಾನ ಗಮನಿಸಿ ಸಂಕ್ರಾಂತಿ ವೇಳೆಗೆ ಪಟ್ಟಿ ಬಿಡುಗಡೆ ಮಾಡಲು ನಿರ್ಧರಿಸಲಾಯಿತು. 

ಕುಮಾರಸ್ವಾಮಿಯವರು ಈಗಾಗಲೇ ಸಿದ್ಧಪಡಿಸಿರುವ ಅಭ್ಯರ್ಥಿಗಳ ಪಟ್ಟಿ ಕುರಿತು ಚರ್ಚೆ ನಡೆದು ಹಾಲಿ ಶಾಸಕರು ಹಾಗೂ ಮಾಜಿ ಶಾಸಕರ ನ್ನೊಳಗೊಂಡ ಪಟ್ಟಿಯನ್ನು ಬಿಡುಗಡೆ ಮಾಡಲು ಸಮ್ಮತಿ ನೀಡಲಾಯಿತು. 224 ವಿಧಾನಸಭೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಹಾಗೂ ಘೋಷಿಸುವ ಅಧಿಕಾರ ಎಚ್‌.ಡಿ. ದೇವೇಗೌಡ ಅವರಿಗೆ ನೀಡಲಾಯಿತು. ರಾಜ್ಯದ 224 ಕ್ಷೇತ್ರಗಳಲ್ಲೂ ಸ್ಪರ್ಧಿಸುವುದು ಹಾಗೂ ಅನಿವಾರ್ಯವಾದರೆ ಸಣ್ಣಪುಟ್ಟ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಕುರಿತಂತೆ ತೀರ್ಮಾನಿಸಲಾಯಿತು.

Edited By

Shruthi G

Reported By

Madhu shree

Comments