ಗುಜರಾತ್ ಚುನಾವಣಾ ಫಲಿತಾಂಶದಿಂದ ಕರ್ನಾಟಕಕ್ಕೆ ಎಫೆಕ್ಟ್ : ಬಿಎಸ್ ವೈ

18 Dec 2017 3:01 PM | Politics
276 Report

''ಪ್ರಧಾನಿ ನರೇಂದ್ರ ಮೋದಿ ಕೆಲಸ ಜನ ಒಪ್ಪಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಈ ಫಲಿತಾಂಶ ರಾಜ್ಯದ ಮೇಲೂ ಪರಿಣಾಮಬೀರಲಿದೆ. ಈಗಾಗಲೇ ಹಲವು ನಾಯಕರು ದೂರವಾಣಿ ಮೂಲಕ ತನ್ನನ್ನು ಸಂಪರ್ಕಿಸಿದ್ದಾರೆ. ನಾವು ಕರ್ನಾಟಕವನ್ನು ಗುಜರಾತ್ ಮಾಡುತ್ತೇವೆ'ಎಂದು ಗುಜರಾತ್ ಚುನಾವಣೆಯ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಮಾಧ್ಯಮಗಳಿಗೆ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದರು.

''ಗುಜರಾತ್ನಲ್ಲಿ ಕಾಂಗ್ರೆಸ್ ಮತ ಪ್ರಮಾಣ ಹೆಚ್ಚಿದೆ. ಗುಜರಾತ್ ಫಲಿತಾಂಶದಿಂದ ಶಕ್ತಿ ಹೊರಬಂದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಲೆಯಿದೆ ಅಧಿಕಾರಕ್ಕೆ ಬರುತ್ತೇವೆ'' ಎಂದು ಶಿವಮೊಗ್ಗದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.

Edited By

Hema Latha

Reported By

Madhu shree

Comments