ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಭವಿಷ್ಯ ಇಂದು ನಿರ್ಧಾರ ?

23 Dec 2017 12:31 PM | Politics
477 Report

900 ಕೋಟಿ ರೂ.ಗಳ ಮೇವು ಹಗರಣದ ತೀರ್ಪನ್ನು ರಾಂಚಿಯ ವಿಶೇಷ ನ್ಯಾಯಾಲಯವೊಂದು ಇಂದು ಹೊರಹಾಕಲಿದೆ. ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್ ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್ ಅವರು ಮುಖ್ಯ ಆರೋಪಿಯಾಗಿದ್ದಾರೆ, ಲಾಲೂ ಭವಿಷ್ಯ ಇಂದು ಕೋರ್ಟ್ ನಲ್ಲಿ ತೀರ್ಮಾನವಾಗಲಿದೆ.

994-1996 ರಲ್ಲಿ ಬಿಹಾರದಲ್ಲಿ ನಡೆದ ಈ ಹಗರಣದಲ್ಲಿ ಪಶುಗಳಿಗೆ ಮೇವು ಹಾಗೂ ಔಷಧಿ ಪೂರೈಸುವ ಉದ್ದೇಶದಿಂದ ಡಿಯೋದರ್(ಈಗ ಜಾರ್ಖಾಂಡ್ ರಾಜ್ಯದಲ್ಲಿದೆ) ಎಂಬ ಜಿಲ್ಲೆಯ ಸರ್ಕಾರಿ ಖಜಾನೆಯಿಂದ ಕೋಟ್ಯಂತರ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿತ್ತು. ಆದರೆ ಈ ಹಣವನ್ನು ಮೂಲ ಉದ್ದೇಶಕ್ಕಾಗಿ ಬಳಸಿಕೊಳ್ಳದೆ ಬಿಹಾರದ ಆಗಿನ ಮುಖ್ಯಮಂತ್ರಿಯಾಗಿದ್ದ ಲಾಲೂ ಯಾದವ್ ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡಿದ್ದಾರೆ ಎಂಬುದು ಆರೋಪವಾಗಿತ್ತು. 1996 ರಲ್ಲಿ ಬೆಳಕಿಗೆ ಬಂದ ಈ ಪ್ರಕರಣದ ವಿಚಾರಣೆ ಡಿ.13, 2017 ಕ್ಕೆ ಅಂತ್ಯವಾಗಿದ್ದು, ಇಂದು ತೀರ್ಪು ಹೊರಬೀಳಲಿದೆ.


Edited By

Shruthi G

Reported By

Madhu shree

Comments