ಹೊಸ ವರ್ಷವನ್ನು ಲಾಲೂ ಜೈಲಿನಲ್ಲಿಯೇ ಕಳೆಯಬೇಕಾಗಿದೆ

23 Dec 2017 4:54 PM | Politics
332 Report

ಲಾಲೂ ಸೇರಿ 22 ಆರೋಪಿಗಳ ಪೈಕಿ 7 ಜನರಿಗೆ ಸಿಬಿಐ ಕೋರ್ಟ್ ಖುಲಾಸೆಗೊಳಿಸಿದೆ.ಒಟ್ಟು 6 ಪ್ರಕರಣಗಳಲ್ಲಿ ಎರಡು ಪ್ರಕರಣಕ್ಕೆ ತೀರ್ಪು ಪ್ರಕಟಿಸಿದ್ದು, ಇನ್ನುಳಿದ 4 ಪ್ರಕರಣಗಳು ವಿಚಾರಣೆ ಹಂತದಲ್ಲಿವೆ. ತೀರ್ಪು ಪ್ರಕಟವಾಗುತ್ತಿದ್ದಂತೆಯೇ ಲಾಲೂ ಪ್ರಸಾದ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಇದರಿಂದ ಲಾಲೂ ಪ್ರಸಾದ್ ಅವರು ಈ ಬಾರಿಯ ಹೊಸ ವರ್ಷವನ್ನು ಜೈಲಿನಲ್ಲಿಯೇ ಕಳೆಯಬೇಕಾಗಿದೆ.

ಇದೇ ಪ್ರಕರಣದಲ್ಲಿ ಲಾಲು ಐದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿ ಅದರಲ್ಲಿ ಎರಡು ವರ್ಷ ಜೈಲು ಶಿಕ್ಷೆ ಅನುಭವಿಸಿ ಸುಪ್ರೀಂ ಕೋರ್ಟ್ ನೀಡಿದ ಜಾಮೀನಿನ ಮೇಲೆ ಹೊರಬಂದಿದ್ದರು. 1996ರಲ್ಲಿ ಬೆಳಕಿಗೆ ಬಂದ ಈ ಪ್ರಕರಣದ ವಿಚಾರಣೆ ಡಿಸೆಂಬರ್ 13, 2017ಕ್ಕೆ ಅಂತ್ಯವಾಗಿತ್ತು. ಆದರೆ ಈ ಹಣವನ್ನು ಮೂಲ ಉದ್ದೇಶಕ್ಕಾಗಿ ಬಳಸಿಕೊಳ್ಳದೆ ಬಿಹಾರದ ಆಗಿನ ಮುಖ್ಯಮಂತ್ರಿಯಾಗಿದ್ದ ಲಾಲೂ ಯಾದವ್ ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡಿದ್ದಾರೆ ಎಂಬುದು ಆರೋಪವಾಗಿತ್ತು.



Edited By

Shruthi G

Reported By

Madhu shree

Comments